ಮಡಿಕೇರಿ, ಸೆ. ೨೧ : ಪ್ರಸಕ್ತ (೨೦೨೩-೨೪) ಸಾಲಿಗೆ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತರ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಪಾರ್ಸಿ, ಸಿಖ್ ಸಮುದಾಯದಿಂದ ಎಂ.ಫಿಲ್/ಪಿ.ಹೆಚ್.ಡಿ. ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಫೆಲೋಶಿಪ್ ಅನುದಾನ ನೀಡಲು ಸೇವಾಸಿಂಧು ಪೋರ್ಟಲ್‌ನ ಆನ್‌ಲೈನ್‌ನಲ್ಲಿ

hಣಣಠಿs:// sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್‌ಎಂಸಿ. ಕಾಲೇಜು ಹತ್ತಿರ, ಮಡಿಕೇರಿ, ಇವರನ್ನು ಸಂಪರ್ಕಿಸುವುದು. ಅರ್ಜಿ ಸಲ್ಲಿಸಲು ಅಕ್ಟೋಬರ್ ೩ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ.೦೮೨೭೨-೨೨೫೫೨೮, ಮಾಹಿತಿ ಕೇಂದ್ರ, ಮಡಿಕೇರಿ ೦೮೨೭೨-೨೨೦೨೧೪ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ.ದಿವಾಕರ ತಿಳಿಸಿದ್ದಾರೆ.