ಸಿದ್ದಾಪುರ, ಸೆ. ೨೧: ಮನೆ ಮೇಲೆ ಬೃಹತ್ ಗಾತ್ರದ ಮರ ಬಿದ್ದು, ಮನೆಯವರು ಪ್ರಾಣಾಪಾಯದಿಂದ ಪಾರಾದ ಘಟನೆ ಅಮ್ಮತ್ತಿ ಗ್ರಾ.ಪಂ ವ್ಯಾಪ್ತಿಯ ಇಂಜಿಲಗೆರೆ ಪುಲಿಯೇರಿ ಗ್ರಾಮದಲ್ಲಿ ನಡೆದಿದೆ.
ಪುಲಿಯೇರಿಯ ನಿವೃತ್ತ ಅಂಗನವಾಡಿ ಶಿಕ್ಷಕಿ ವತ್ಸ್ಸಲ ಎಂಬವರ ಮನೆಯ ಮೇಲೆ ರಾತ್ರಿ ಮರ ಬಿದ್ದ ಪರಿಣಾಮ ಅಡುಗೆ ಕೋಣೆ ಮತ್ತು ಶೌಚ ಗೃಹಕ್ಕೆ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಬವಿಸಿಲ್ಲ. ಸ್ಥಳಕ್ಕೆ ಅಮ್ಮತ್ತಿ ಹೋಬಳಿ ಕಂದಾಯ ಪರಿವೀಕ್ಷಕ ಅನಿಲ್ ಕುಮಾರ್ ಹಾಗೂ ಗ್ರಾಮ ಆಡಳಿತಾಧಿಕಾರಿ, ಸ್ಥಳೀಯ ಗ್ರಾ.ಪಂ ಸದಸ್ಯರು ಭೇಟಿ ನೀಡಿದ್ದರು.