ಮಡಿಕೇರಿ, ಸೆ. ೨೨: ಐತಿಹಾಸಿಕ ಮಡಿಕೇರಿ ದಸರಾಕ್ಕೆ ರೂ. ೨ ಕೋಟಿ ಅನುದಾನ ಬಿಡುಗಡೆಗೊಳಿಸಬೇಕೆಂದು ದಸರಾ ಸಮಿತಿ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.

ಇಂದು ಬೆಂಗಳೂರಿನ ವಿಧಾನ ಸೌಧದಲ್ಲಿ ಜಿಲ್ಲೆಯ ಶಾಸಕದ್ವಯರ ನೇತೃತ್ವದಲ್ಲಿ ಮುಖ್ಯಮಂತ್ರಿಯನ್ನು ಭೇಟಿಯಾದ ನಿಯೋಗ, ರೂ. ೭೫ ಲಕ್ಷ ಅನುದಾನವನ್ನು ಬಿಡುಗಡೆ ಗೊಳಿಸಲು ಸರಕಾರ ಆಡಳಿತಾತ್ಮಕ ಒಪ್ಪಿಗೆ ನೀಡಿದೆ. ಆದರೆ, ದಸರಾಕ್ಕೆ ಹೆಚ್ಚುವರಿ ಹಣ ಬೇಕಾಗಿದ್ದು, ಕನಿಷ್ಟ ರೂ. ೨ ಕೋಟಿ ಬಿಡುಗಡೆಗೊಳಿಸ ಬೇಕೆಂದು ಕೋರಿದೆ.

ಬರಗಾಲ ಸೃಷ್ಟಿಯಾಗಿರುವ ಹಿನ್ನೆಲೆ ಹಣ ಬಿಡುಗಡೆಗೆ ಸಮಸ್ಯೆಯಾಗಿದೆ. ಮತ್ತೊಮ್ಮೆ ಪರಿಶೀಲಿಸಿ, ಕೊಡಗಿನ ಶಾಸಕರು ಗಳೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ತಿಳಿಸಲಾಗುವುದು ಎಂದು ನಿಯೋಗಕ್ಕೆ

(ಮೊದಲ ಪುಟದಿಂದ) ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ದಸರಾ ಸಮಿತಿ ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ ಮಾಹಿತಿ ನೀಡಿದ್ದಾರೆ.

ಸಚಿವರ ಭೇಟಿ ಸಂದರ್ಭ ಶಾಸಕರುಗಳಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ಡಾ. ಮಂಥರ್ ಗೌಡ, ಮಡಿಕೇರಿ ದಸರಾ ಸಮಿತಿ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ಪ್ರಧಾನ ಕಾರ್ಯದರ್ಶಿ ರಾಜೇಶ್ ಯಲ್ಲಪ್ಪ, ಖಜಾಂಜಿ ಅರುಣ್ ಶೆಟ್ಟಿ, ಗೌರವ ಸಲಹೆಗಾರ ಟಿ.ಪಿ. ರಮೇಶ್ ಹಾಜರಿದ್ದರು.