ಮೈಸೂರು, ಸೆ. ೨೧ : ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಕಾನೂನು ಘಟಕದ ವತಿಯಿಂದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಇತ್ತೀಚೆಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರು, ಪ್ರಜಾಪ್ರಭುತ್ವದ ಕತ್ತು ಹಿಸುಕುವ ಹುನ್ನಾರ ನಡೆಯುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಗಾಳಿ ಸುದ್ದಿಗಳು ಹೆಚ್ಚಾಗುತ್ತಿದ್ದು, ಸತ್ಯ ಸಂಗತಿಗಳನ್ನು ಸುಳ್ಳು ಎಂದು ಸುಳ್ಳನ್ನು ಸತ್ಯವೆಂದು ಬಿಂಬಿಸ ಲಾಗುತ್ತಿದೆ. ಈ ಬಗ್ಗೆ ವಕೀಲರು ಸುಮ್ಮನಿರದೇ ಕಾನೂನು ಹೋರಾಟ ನಡೆಸಬೇಕು ಎಂದು ಸಲಹೆ ನೀಡಿದರು. ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ) ಮತ್ತು ರಾಷ್ಟಿçÃಯ ಪೌರತ್ವ ನೋಂದಣಿ (ಎನ್ಆರ್ಸಿ) ಜಾರಿಗೆ ಕೇಂದ್ರ ಸರಕಾರ ಮುಂದಾಗುತ್ತಿದ್ದು, ವಿಭಿನ್ನ ಸಂಸ್ಕೃತಿ ಹೊಂದಿರುವ ಭಾರತಕ್ಕೆ ಏಕರೂಪ ನಾಗರಿಕ ಸಂಹಿತೆ ಅಗತ್ಯವಿದೆಯೇ ಎಂದು ಪ್ರಶ್ನಿಸಿದರು.
ಅಸಂವಿಧಾನ ನಡೆಗಳನ್ನು ತೊಡೆದು ಹಾಕಿ ಸಂವಿಧಾನ ಆಶಯವನ್ನು ಜಾರಿ ಮಾಡುವ, ಸಂವಿಧಾನವನ್ನು ರಕ್ಷಣೆ ಮಾಡುವ ಹೊಣೆಗಾರಿಕೆ ನ್ಯಾಯಾಂಗದ ಮೇಲಿದೆ ಎಂದು ಹೇಳಿದರು.
ವಕೀಲರ ರಕ್ಷಣಾ ಕಾಯಿದೆ ಜಾರಿಗೆ ಒತ್ತಾಯ ಮಾಡಲಾಗುತ್ತಿದೆ. ವಕೀಲರ ಸ್ಥಿತಿಯೇ ಹೀಗಾದರೆ, ಇನ್ನೂ ದಲಿತರು, ಅಲ್ಪಸಂಖ್ಯಾತರು ಮತ್ತು ಮಹಿಳೆಯರ ಪರಿಸ್ಥಿತಿ ಏನು? ಆದ್ದರಿಂದ ಜನರಿಗೆ ಕಾನೂನಿನ ಜಾಗೃತಿ ಮೂಡಿಸುವ ಕೆಲಸವಾಗ ಬೇಕು. ಈ ಕೆಲಸವನ್ನು ಕಾಂಗ್ರೆಸ್ ಬಿಟ್ಟು ಬೇರೆಯವರು ಮಾಡುವುದಿಲ್ಲ. ಈ ನಿಟ್ಟಿನಲ್ಲಿ ಪಕ್ಷದ ಕಾನೂನು ವಿಭಾಗ ಕಾರ್ಯೋನ್ಮುಖವಾಗಬೇಕು ಎಂದು ಸಲಹೆ ನೀಡಿದರು. ಈ ಸಂದರ್ಭ ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರಾಗಿ ತಿಮ್ಮಯ್ಯ ಮತ್ತು ಇತರ ಪದಾಧಿಕಾರಿ ಗಳು ಪದಗ್ರಹಣ ಮಾಡಿದರು.
ಕಾರ್ಯಕ್ರಮದಲ್ಲಿ ಎಂಎಲ್ಸಿ ಗಳಾದ ಡಿ. ತಿಮ್ಮಯ್ಯ, ಮಧು ಜಿ. ಮಾದೇಗೌಡ, ಮಾಜಿ ಎಂಎಲ್ಸಿ ಧರ್ಮಸೇನ, ಜಿಲ್ಲಾಧ್ಯಕ್ಷ ಡಾ. ಬಿ.ಜೆ. ವಿಜಯ್ಕುಮಾರ್, ವಕೀಲರಾದ ಸಿ.ಎಂ. ಜಗದೀಶ್, ಮಂಜುಳಾ ಮಾನಸ ಇದ್ದರು.