ವೀರಾಜಪೇಟೆ, ಸೆ. ೨೧: ಕೊಡಗು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಮುಲ್ಲೇಂಗಡ ಮಧೋಶ್ ಪೂವಯ್ಯ ಅವರನ್ನು ಮತ್ತೊಂದು ಅವಧಿಗೆ ನೇಮಕ ಮಾಡಲಾಗಿದೆ ಎಂದು ಚುಟುಕು ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ತೋಂಟದಾರ್ಯ ತಿಳಿಸಿದ್ದಾರೆ. ಮಧೋಶ್ ಪೂವಯ್ಯ ಅವರ ಕಾರ್ಯ ವೈಖರಿಯನ್ನು ಗಮನಿಸಿ ಮತ್ತೊಮ್ಮೆ ಅವರನ್ನು ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡ ಲಾಗಿದ್ದು ತಾಲೂಕು ಅಧ್ಯಕ್ಷರನ್ನು ನೇಮಕ ಮಾಡುವ ಹೊಣೆಗಾರಿಕೆಯನ್ನು ಮಧೋಶ್ ಪೂವಯ್ಯ ಅವರಿಗೆ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.