ಶನಿವಾರಸಂತೆ, ಸೆ.೨೧ : ಮಾಲಂಬಿ ವಿದ್ಯುತ್ ಫೀಡರ್ನಲ್ಲಿ ತುರ್ತು ನಿರ್ವಹಣೆ ಕೆಲಸ ಇರುವ ಕಾರಣ ತಾ. ೨೨ ರಂದು (ಇಂದು) ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೬ ಗಂಟೆಯವರೆಗೆ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದೆ.
ಆಲೂರುಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಲಂಬಿ, ಹೊಸಗುತ್ತಿ, ಕಣಿವೆ ಬಸವನಹಳ್ಳಿ, ಕಂತೆ ಬಸವನಹಳ್ಳಿ, ಬಡುಬನಹಳ್ಳಿ, ಸೀಗೆಮರೂರು ಗ್ರಾಮಗಳಿಗೆ ವಿದ್ಯುತ್ ಇರುವುದಿಲ್ಲ. ಗ್ರಾಹಕರು ಸಹಕರಿಸಬೇಕು ಎಂದು ಸೆಸ್ಕ್ನ ಕಾರ್ಯ ಮತ್ತು ಪಾಲನೆ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.