ಮಡಿಕೇರಿ, ಸೆ.೨೨ : ಸರ್ಕಾರದ ೫ ಗ್ಯಾರಂಟಿ ಯೋಜನೆಯನ್ನು ಫಲಾನುಭವಿಗಳಿಗೆ ಸರಿಯಾದ ಕ್ರಮದಲ್ಲಿ ತಲುಪಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್. ವೀಣಾ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ತಾ. ೨೫ ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜನತಾ ದರ್ಶನ” ಕಾರ್ಯಕ್ರಮ ನಡೆಯಲಿದ್ದು, ಜನತಾ ದರ್ಶನ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಬೇಕು ಹಾಗೂ ಸಾರ್ವಜನಿಕರ ಹಾಗೂ ಫಲಾನುಭವಿಗಳ ಸಮಸ್ಯೆಯನ್ನು ಪರಿಹರಿಸಲು ಸೂಕ್ತ ಕ್ರಮಗಳನ್ನು ಜರುಗಿಸಬೇಕು. ಆದಷ್ಟು ಬೇಗ ಸ್ಥಳೀಯ ಮಟ್ಟದಲ್ಲಿ ಯಾವುದೇ ಸಮಸ್ಯೆ ಇದ್ದರೂ ಸಂಬAಧಪಟ್ಟ ಅಧಿಕಾರಿಗಳು ಗಮನಹರಿಸಿ ಸಮಸ್ಯೆಗಳನ್ನು ಪರಿಹರಿಸಿ ಕೊಡಬೇಕೆಂದು ಸಲಹೆ ನೀಡಿದರು.
ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷಿö್ಮ ಯೋಜನೆ ಕುರಿತಂತೆ ಫಲಾನುಭವಿಗಳಿಗೆ ಹಣ ವರ್ಗಾವಣೆ ಕುರಿತು ಸಂಬAಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು. ಹಾಗೂ ನಾರಿ ಶಕ್ತಿ ಯೋಜನೆ ಕುರಿತಂತೆ ಬಸ್ನಲ್ಲಿ ಪ್ರಯಾಣಿಸಿದ ಫಲಾನುಭವಿಗಳ ಮಾಹಿತಿ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳಬೇಕು. ಅನ್ನಭಾಗ್ಯ ಯೋಜನೆ ಕುರಿತಂತೆ ಫಲಾನುಭವಿಗಳಿಂದ ಬಂದAತಹ ಅಹವಾಲನ್ನು ಇಲಾಖಾ ಮಟ್ಟದಲ್ಲಿ ಪರಿಹರಿಸಿಕೊಳ್ಳಬೇಕು ಎಂದರು.
ಇಲಾಖಾ ವತಿಯಿಂದ ನಡೆಯುವ ಕಾರ್ಯಕ್ರಮಗಳಿಗೆ ಆಯಾಯ ಇಲಾಖೆಯ ಅಧಿಕಾರಿಗಳು ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ಅಧಿಕಾರಿಗಳಿಗೆ ತಿಳಿಸಿದರು. ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.