ಬೆಂಗಳೂರು, ಸೆ. ೨೩ : ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ (ಗಿಚಿಟuಚಿಣioಟಿ ಅommiಣಣee) ೨೦೨೩-೨೪ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ನೋಂದಣಿಗೆ ಹಾಜರುಪಡಿಸುವ ದಸ್ತಾವೇಜುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳು ಇರುತ್ತವೆ, ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿಗಳ ಕೆಲಸದ ಅವಧಿಯನ್ನು ತಾ. ೨೩ ರಿಂದ ಜಾರಿಗೆ ಬರುವಂತೆ ಬೆಳಿಗ್ಗೆ ೮ ಗಂಟೆಯಿAದ ರಾತ್ರಿ ೮ ಗಂಟೆವರೆಗೆ ಕಾರ್ಯನಿರ್ವಹಿಸಲು ಕಚೇರಿ ಅವಧಿಯನ್ನು ವಿಸ್ತರಿಸಿ ಆದೇಶಿಸಲಾಗಿದೆ. ಈ ಕೆಲಸದ ಅವಧಿಯು ತಾ. ೩೦ರವರೆಗೆ ಮಾತ್ರ ಜಾರಿಯಲ್ಲಿರುತ್ತದೆ ಎಂದು ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರಾದ ಬಿ.ಆರ್. ಮಮತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.