ಮಡಿಕೇರಿ, ಸೆ. ೨೨: ತಾ. ೨೫ ರಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಅವರು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಅಂದು ಬೆಳಿಗ್ಗೆ ೮.೩೦ಕ್ಕೆ ಜಿಲ್ಲಾಡಳಿತ ಭವನದಲ್ಲಿ ಮಡಿಕೇರಿ ದಸರಾ ಸಂಬAಧ ಪೂರ್ವಾಭಾವಿ ಸಭೆ ನಡೆಸಿ ಬೆಳಿಗ್ಗೆ ೧೦ ಗಂಟೆಗೆ ನಾಪೋಕ್ಲಿನಲ್ಲಿ ಜನತಾ ದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸಂಜೆ ೪ ಗಂಟೆಗೆ ಗೋಣಿಕೊಪ್ಪ ದಸರಾ, ತೀರ್ಥೋದ್ಭವ ಪೂರ್ವಸಿದ್ಧತೆ ಕುರಿತು ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತಕಾರ್ಯದರ್ಶಿ ವೀರಭದ್ರ ಹಂಚಿನಾಳ ತಿಳಿಸಿದ್ದಾರೆ.