ಗೀತಾ ಹರೀಶ್
ಶನಿವಾರಸಂತೆ, ಸೆ. ೨೩: ಗ್ರಾಮೀಣ ಮಕ್ಕಳ ಸರ್ವೋತ್ತಮ ಬೆಳವಣಿಗೆಗೆ ಪ್ರತಿಭಾ ಕಾರಂಜಿ-ಕಲೋತ್ಸವ ಸ್ಪರ್ಧಾ ಕಾರ್ಯಕ್ರಮ ಸಹಕಾರಿಯಾಗಿದ್ದು, ಪ್ರತಿಭೆ ಅನಾವರಣಗೊಳ್ಳಲು ಉತ್ತಮ ವೇದಿಕೆಯೂ ಆಗಿದೆ ಎಂದು ಶನಿವಾರಸಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಹರೀಶ್ ಅಭಿಪ್ರಾಯ ಪಟ್ಟರು. ಪಟ್ಟಣದ ಬ್ರೆöÊಟ್ ಅಕಾಡೆಮಿ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ ಶಾಲಾ ಸಭಾಂಗಣದಲ್ಲಿ ನಡೆದ ೨೦೨೩-೨೪ನೇ ಸಾಲಿನ ಪ್ರತಿಭಾ ಕಾರಂಜಿ-ಕಲೋತ್ಸವ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶನಿವಾರಸಂತೆ ಕ್ಲಸ್ಟರ್‌ನ ಸಮೂಹ ಸಂಪನ್ಮೂಲ ವ್ಯಕ್ತಿ ಸಿ.ಕೆ. ದಿನೇಶ್ ಪ್ರಾಸ್ತಾವಿಕ ನುಡಿಗಳನ್ನಾಡಿ, ಈ ಸ್ಪರ್ಧಾ ಕಾರ್ಯಕ್ರಮ ವಿದ್ಯಾರ್ಥಿಗಳ ಪಠ್ಯ ಜತೆಗೆ ಪಠ್ಯೇತರ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗಿದೆ. ನಾಡು, ನುಡಿ, ಸಂಸ್ಕೃತಿಯನ್ನು ಬಿಂಬಿಸುವ ಬಹುಮುಖ ಪ್ರತಿಭೆ ಬೆಳಕಿಗೆ ಬರುತ್ತದೆ ಎಂದರು. ಕ್ಲಸ್ಟರ್ ವ್ಯಾಪ್ತಿಯ ೧೩ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳು ಛದ್ಮವೇಶ, ಹಾಡು, ನೃತ್ಯ, ಭಾಷಣ, ಚಿತ್ರಕಲೆ, ಕಥೆ ಹೇಳುವುದು ಇತ್ಯಾದಿ ಸ್ಪರ್ಧೆಗಳ ಮೂಲಕ ಪ್ರತಿಭೆ ಮೆರೆದು ರಂಜಿಸಿದರು. ಅಧ್ಯಕ್ಷತೆ ವಹಿಸಿದ್ದ ಬ್ರೆöÊಟ್ ಅಕಾಡೆಮಿ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಹೇಮಾ ಪರಮೇಶ್ ಮಾತನಾಡಿ, ಮಕ್ಕಳ ಸುಪ್ತ ಪ್ರತಿಭೆ ಹೊರಹೊಮ್ಮಿಸಲು ಸೂಕ್ತ ವೇದಿಕೆ ಕಲ್ಪಿಸುವ ಇಂತಹ ಕಾರ್ಯಕ್ರಮದ ಯಶಸ್ಸಿಗೆ ಶಿಕ್ಷಕರ ಜತೆ ಪೋಷಕರೂ ಸಹಕಾರ ನೀಡಬೇಕು. ಮಕ್ಕಳ ವ್ಯಕ್ತಿತ್ವ ವಿಕಸನದ ಜತೆಗೆ ಅವರಲ್ಲಿ ಸ್ಪರ್ಧಾ ಮನೋಭಾವ ಮೂಡುತ್ತದೆ ಎಂದರು. ಕೂಡಿಗೆ ಡಯಟ್ ಉಪನ್ಯಾಸಕ ಸಿದ್ದೇಶ್ ಕುಮಾರ್ ಮಾತನಾಡಿದರು. ವಿದ್ಯಾಸಂಸ್ಥೆಯ ಅಧ್ಯಕ್ಷ ಪರಮೇಶ್, ನಿರ್ದೇಶಕಿ ಸೀತಮ್ಮ, ಮುಖ್ಯಶಿಕ್ಷಕಿ ಚೈತ್ರಾ, ಶಿಕ್ಷಕಿಯರು, ಗ್ರಾಮ ಪಂಚಾಯಿತಿ ಸದಸ್ಯೆ ಫರ್ಜಾನಾ, ನೌಕರ ಸಂಘಟನೆಯ ನಿರ್ದೇಶಕ ಎಸ್.ಎಂ. ಸುರೇಶ್, ಸಿಆರ್‌ಪಿ ಜಾನ್‌ಪಾಲ್, ಪ್ರಾಥಮಿಕ ಶಾಲಾ ಶಿಕ್ಷಕ ಸಂಘಟನಾ ಕಾರ್ಯದರ್ಶಿ ಕವಿತಾ, ಬಿ.ಆರ್.ಪಿ. ಮಧು, ಸಿ.ಆರ್.ಪಿ.ಗಳಾದ ಮನೋಹರ್, ರವೀಶ್, ಚೈತ್ರಾ, ಪ್ರೇಮಾ, ಜಾನ್‌ಪಾಲ್, ವಿವಿಧ ಶಾಲಾ ಮುಖ್ಯಶಿಕ್ಷಕರು, ಶಿಕ್ಷಕರು ಹಾಜರಿದ್ದರು. ಮುಖ್ಯಶಿಕ್ಷಕಿ ಚೈತ್ರಾ ನಿರೂಪಿಸಿ, ಶಿಕ್ಷಕಿ ರೂಪಾವತಿ ವಂದಿಸಿದರು.