ಮಡಿಕೇರಿ, ಸೆ. ೨೩ : ಭಾರತೀಯ ಜನತಾ ಪಕ್ಷ ಹಾಗೂ ಜಾತ್ಯತೀತ ಜನತಾ ದಳ ಮುಂದಿನ ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಮೈತ್ರಿ ಮಾಡಿಕೊಂಡಿರುವುದನ್ನು ಜಿಲ್ಲೆಯ ಬಿಜೆಪಿ ಪ್ರಮುಖರು ಸ್ವಾಗತಿಸಿದ್ದು, ಚುನಾವಣೆಯಲ್ಲಿ ಈ ನಿರ್ಧಾರದಿಂದ ಗೆಲುವಿಗೆ ಪೂರಕ ವಾತಾವರಣ ಸೃಷ್ಟಿಯಾಗಿದೆ ಎಂಬ ಅಭಿಪ್ರಾಯ ನೀಡಿದ್ದಾರೆ.
ಸಂಘಟಿತ ಪ್ರಯತ್ನ - ರಾಬಿನ್
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಉಭಯ ಪಕ್ಷಗಳ ಬೆಂಬಲಿತ ಅಭ್ಯರ್ಥಿ ಗೆಲುವಿಗೆ ಸಂಘಟಿತ ಪ್ರಯತ್ನ ಮಾಡಲಾಗುವುದು. ರಾಜ್ಯ, ರಾಷ್ಟಿçÃಯ ವರಿಷ್ಠರ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಪಳೆಯಂಡ ರಾಬಿನ್ ದೇವಯ್ಯ ತಿಳಿಸಿದ್ದಾರೆ.
ಮತ್ತೊಮ್ಮೆ ಸಂಸದನಾಗುತ್ತೇನೆ - ಪ್ರತಾಪ್
ಮೈತ್ರಿಗೆ ಮುಂದಾಗಿರುವುದು ರಾಷ್ಟç ವರಿಷ್ಠರ ತೀರ್ಮಾನ. ಮೈತ್ರಿಯಿಂದ ರಾಷ್ಟç ಹಾಗೂ ರಾಜ್ಯ ರಾಜಕಾರಣಕ್ಕೆ ಉತ್ತಮ ಎಂಬ ಉದ್ದೇಶದಿಂದ ಎಲ್ಲಾ ಸಾಧಕ ಬಾಧಕಗಳನ್ನು ಚಿಂತಿಸಿ ಕೇಂದ್ರ ನಾಯಕರು ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಪ್ರಪಂಚದಲ್ಲಿ ಅತೀದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದ್ದು, ಇದರ ಹಿಂದೆ ಅನೇಕರ ಶ್ರಮವಿದೆ. ಇದರೊಂದಿಗೆ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಕಳೆದ ೧೦ ವರ್ಷಗಳ ಕಾಲ ಉತ್ತಮ ಸೇವೆ ಮಾಡಿದ ತೃಪ್ತಿ ಇದೆ. ಮುಂದಿನ ೫ ವರ್ಷಗಳಲ್ಲಿ ಎಲ್ಲಾ ಯೋಜನೆ ಪೂರ್ಣಗೊಳಿಸುತ್ತೇನೆ. ನನ್ನ ಮೇಲೆ ಅಸೂಯೆಯಿಂದ ಒಂದು ವರ್ಗದ ಮಂದಿ ಕೆಲವರ ಹೆಸರನ್ನು ತೇಲಿಬಿಡುತ್ತಿದ್ದು, ಜನರ ಆಶೀರ್ವಾದದಿಂದ ಮತ್ತೊಮ್ಮೆ ಸಂಸದನಾಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸುವ ಮೂಲಕ, ಪರೋಕ್ಷವಾಗಿ ಸ್ಪರ್ಧಿಸುವ ಇಂಗಿತ ಹೊರಹಾಕಿದ್ದಾರೆ.
ರಾಜ್ಯದಲ್ಲಿ ಬಹುಮತ - ಸುಜಾ
ರಾಜ್ಯದ ೨೮ ಲೋಕಸಭಾ ಕ್ಷೇತ್ರಗಳಲ್ಲಿ ಮೈತ್ರಿ ಗೆಲುವು ಸಾಧಿಸಲಿದೆ ಎಂದು ವಿಧಾನ ಪರಿಷತ್ತು ಸದಸ್ಯ ಮಂಡೇಪAಡ ಸುಜಾಕುಶಾಲಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲುವಿಗೆ ಹೈಕಮಾಂಡ್‌ನ ಈ ನಿರ್ಧಾರ ಉತ್ತಮ. ಸಂಘಟಿತವಾಗಿ ಗೆಲುವಿಗೆ ಶ್ರಮಿಸಲಾಗುವುದು. ಜೆಡಿಎಸ್‌ಗೂ ಇದು ಒಳ್ಳೆಯ ಅವಕಾಶ. ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಪ್ರಾಬಲ್ಯ ಇರುವ ಹಿನ್ನೆಲೆ ಗೆಲುವು ಸುಲಭವಾಗಲಿದೆ ಎಂದು ಹೇಳಿದರು.
ಈ ಬುದ್ಧಿ ಮೊದಲೇ ಬರಬೇಕಿತ್ತು - ರಂಜನ್
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಗೆ ಮುಂದಾಗಬೇಕಾಗಿತ್ತು ಎಂದು ಮಡಿಕೇರಿ ಕ್ಷೇತ್ರದ ಮಾಜಿ ಶಾಸಕ ಮಂಡೇಪAಡ ಅಪ್ಪಚ್ಚು ರಂಜನ್ ಅಭಿಪ್ರಾಯಿಸಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದರೆ ಮತಗಳು ವಿಭಜನೆಯಾಗುತ್ತಿರಲಿಲ್ಲ. ಈ ಬುದ್ಧಿ ಮೊದಲೇ ಬರಬೇಕಾಗಿತ್ತು. ಮುಂದಿನ ಲೋಕಸಭಾ ಚುನಾವಣೆಗೆ ಮೈತ್ರಿ ಸಹಕಾರಿಯಾಗಲಿದೆ. ಜಿಲ್ಲೆಯಲ್ಲಿಯೂ ಜೆಡಿಎಸ್ ಮತದಾರರು ಹೆಚ್ಚಿದ್ದಾರೆ. ಅವರನ್ನು ಸೆಳೆಯುವ ಕೆಲಸ ಮಾಡಲಾಗುತ್ತದೆ. ಕೇಂದ್ರ, ರಾಜ್ಯ ವರಿಷ್ಠರ ನಿರ್ಧಾರಕ್ಕೆ ನಾವು ಬದ್ಧ ಎಂದು ತಿಳಿಸಿದ್ದಾರೆ.
ಸಂಘಟಿತರಾಗಿ ಶ್ರಮ - ಕೆ.ಜಿ. ಬೋಪಯ್ಯ
ಮುಂದಿನ ಲೋಕಸಭಾ ಚುನಾವಣೆ ಎದುರಿಸಲು ಬಿಜೆಪಿ-ಜೆಡಿಎಸ್ ಮೈತ್ರಿ ಪೂರಕವಾಗಿರಲಿದೆ. ಇಂದಿನ ಸ್ಥಿತಿಯಲ್ಲಿ ಇದು ಅಗತ್ಯವಿದೆ. ಕೇಂದ್ರ ವರಿಷ್ಠರು ಸಕಾಲಕ್ಕೆ ಸಮರ್ಪಕ ನಿರ್ಧಾರ ಕೈಗೊಂಡಿದ್ದಾರೆ ಎಂದು ವೀರಾಜಪೇಟೆ ಕ್ಷೇತ್ರದ ಮಾಜಿ ಶಾಸಕ ಕೆ.ಜಿ. ಬೋಪಯ್ಯ ತಿಳಿಸಿದ್ದಾರೆ,
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಉಭಯ ಪಕ್ಷಗಳು ಸಂಘಟಿತರಾಗಿ ಶ್ರಮವಹಿಸಿ ಹೆಚ್ಚಿನ ಸ್ಥಾನ ಗೆಲ್ಲಲು ಕೆಲಸ ಮಾಡಲಾಗುವುದು. ಜಿಲ್ಲೆಯಲ್ಲಿ ಕೆಲ ಜೆಡಿಎಸ್ ಪ್ರಮುಖರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಆದ್ದರಿಂದ ಯಾವುದೇ ವ್ಯತಿರಿಕ್ತ ಪರಿಣಾಮ ಬೀರುವುದಿಲ್ಲ. ಜೆಡಿಎಸ್ ಮತದಾರರು ಹಾಗೂ ಕಾರ್ಯಕರ್ತರನ್ನು ನಾವು ಸಂಪರ್ಕಿಸಿ ಸಹಕಾರ ಕೋರಲಾಗುವುದು ಎಂದರು.
ಆನೆಬಲ ಬಂದಿದೆ - ಸುನಿಲ್
ಬಿಜೆಪಿಯೊಂದಿಗೆ ಜೆಡಿಎಸ್ ಸೇರಿರುವುದು ಆನೆಬಲ ಬಂದAತಾಗಿದೆ. ಇದು ಮುಂದಿನ ಚುನಾವಣೆಯ ಗೆಲುವಿಗೆ ದಿಕ್ಸೂಚಿಯಾಗಿದೆ. ಜಿಲ್ಲೆಯಲ್ಲಿ ಒಂದಾಗಿ ಪಕ್ಷ ಸಂಘಟಿಸುತ್ತೇವೆ. ಹೆಚ್.ಡಿ.ಕುಮಾರಸ್ವಾಮಿ ಉತ್ತಮ ನಾಯಕತ್ವ ಹೊಂದಿರುವ ರಾಜಕಾರಣಿಯಾಗಿದ್ದು, ಬದ್ಧತೆಯಿಂದ ಕೆಲಸ ಮಾಡುವ ವಿಶ್ವಾಸವಿದೆ ಎಂದು ವಿಧಾನ ಪರಿಷತ್ತು ಮಾಜಿ ಸದಸ್ಯ ಮಂಡೇಪAಡ ಸುನಿಲ್ ಸುಬ್ರಮಣಿ ಇಂಗಿತ ವ್ಯಕ್ತಪಡಿಸಿದ್ದಾರೆ.