ಮಡಿಕೇರಿ, ಸೆ. ೨೩ : ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆಯ ವತಿಯಿಂದ `ಭವಿಷ್ಯ ನಿಧಿ ನಿಮ್ಮ ಹತ್ತಿರ' ೨.೦ ಅಡಿಯಲ್ಲಿ ಕೊಡಗು ಜಿಲ್ಲಾ ವ್ಯಾಪ್ತಿಯ ಮಾಹಿತಿ ಕಾರ್ಯಕ್ರಮವನ್ನು ಸಂಘಟನೆಯ ಮೈಸೂರು ಪ್ರಾದೇಶಿಕ ಕಚೇರಿ ಯಿಂದ ನಡೆಸಲಾಗುತ್ತದೆ. ತಾ. ೨೭ ರಂದು ಬೆಳಿಗ್ಗೆ ೯ ಗಂಟೆಗೆ ಸೋಮವಾರ ಪೇಟೆ ಪಟ್ಟಣ ಪಂಚಾಯಿತಿ ಕಟ್ಟಡದಲ್ಲಿ ಕಾರ್ಯಕ್ರಮ ನಡೆಯಲಿದೆ. ಪಿ.ಎಫ್ ಸದಸ್ಯರು, ಪಿಂಚಣಿದಾರರು, ಉದ್ಯೋಗದಾತರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾಹಿತಿ ಪಡೆದುಕೊಳ್ಳುವಂತೆ ಸಂಘಟನೆಯ ಪ್ರಕಟಣೆ ಕೋರಿದೆ.