ಮಡಿಕೇರಿ, ಸೆ. ೨೩: ಮೂರ್ನಾಡುವಿನ ಜ್ಞಾನಜ್ಯೋತಿ ವಿದ್ಯಾ ಸಂಸ್ಥೆಯ ಕ್ರೀಡಾಪಟುಗಳು ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಮೂರ್ನಾಡಿನಲ್ಲಿ ನಡೆದ ಜಿಲ್ಲಾಮಟ್ಟದ ಫುಟ್ಬಾಲ್ ಪಂದ್ಯಾವಳಿ ಯಲ್ಲಿ ಜಯಗಳಿಸಿದ್ದಾರೆ. ಜ್ಞಾನ ಜ್ಯೋತಿ ವಿದ್ಯಾ ಸಂಸ್ಥೆ ಮೂರ್ನಾಡು ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ಬಾಲಕರ ತಂಡವು ವೀರಾಜಪೇಟೆ ತಾಲೂಕಿನ ಬಾಲಕರ ತಂಡವನ್ನು ೨-೦ ಗೋಲುಗಳಿಂದ ಮಣಿಸಿ ಜಿಲ್ಲಾಮಟ್ಟದ ಪುಟ್ಭಾಲ್ ಪ್ರಶಸ್ತಿ ಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಈ ತಂಡ ಮಂಗಳೂರಿನಲ್ಲಿ ನಡೆಯಲಿರುವ ವಿಭಾಗೀಯ ಮಟ್ಟದ ಪಂದ್ಯಾವಳಿಯಲ್ಲಿ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. ದೈಹಿಕ ಶಿಕ್ಷಕರಾದ ಬೈಲೆ ಯಂ. ಅಶೋಕ್ ಅವರು ತರಬೇತು ದಾರರಾಗಿದ್ದಾರೆ.ಪಂದ್ಯಾವಳಿಯಲ್ಲಿ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. ದೈಹಿಕ ಶಿಕ್ಷಕರಾದ ಬೈಲೆ ಯಂ. ಅಶೋಕ್ ಅವರು ತರಬೇತು ದಾರರಾಗಿದ್ದಾರೆ.