ಪೊನ್ನಂಪೇಟೆ: ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಅಂತರರಾಷ್ಟಿçÃಯ ಪ್ರಜಾಪ್ರಭುತ್ವ ದಿನದ ಅಂಗವಾಗಿ, ಸಂವಿಧಾನ ಪೀಠಿಕೆ ಓದುವ ಮೂಲಕ ವಿದ್ಯಾರ್ಥಿಗಳಿಗೆ ಸಂವಿಧಾನದ ಮಹತ್ವದ ಬಗ್ಗೆ ತಿಳಿಸಲಾಯಿತು. ಪ್ರಾಂಶುಪಾಲ ಡಾ.ಎಂ.ಬಿ.ಕಾವೇರಪ್ಪ, ಉಪ ಪ್ರಾಂಶುಪಾಲ ಡಾ.ಎ.ಎಸ್. ಪೂವಮ್ಮ, ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಪೊನ್ನAಪೇಟೆ: ಇಲ್ಲಿನ ಹಳ್ಳಿಗಟ್ಟು ಸಿ.ಐ.ಪಿ.ಯು.ಸಿ ಕಾಲೇಜಿನಲ್ಲಿ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಯಿತು. ದ್ವಿತೀಯ ಪಿ.ಯು. ವಿದ್ಯಾರ್ಥಿ ಎ.ಎಸ್. ಚಿನ್ಮಯ್ ಸಂವಿಧಾನ ಪ್ರಸ್ತಾವನೆಯ ಪ್ರತಿಜ್ಞೆಯನ್ನು ಬೋಧಿಸಿದರು. ಪ್ರಥಮ ಪಿ.ಯು ವಿದ್ಯಾರ್ಥಿನಿ ಎ.ಆರ್ ಪಾನ್ಯ ಪೊನ್ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯ ಮಹತ್ವ ಕುರಿತು ವಿಚಾರ ಮಂಡಿಸಿದರು. ಸಿ.ಐ.ಪಿ.ಯು. ಪ್ರಾಂಶುಪಾಲೆ ಡಾ. ರೋಹಿಣಿ ತಿಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದ ನೇತೃತ್ವವನ್ನು ಹಿಂದಿ ಭಾಷಾ ಉಪನ್ಯಾಸಕಿ ಎಂ.ಆರ್. ರೇಷ್ಮಾ ವಹಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ಉಪನ್ಯಾಸಕ ವೃಂದ, ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿ ವೃಂದದವರು ಹಾಜರಿದ್ದು ಪ್ರತಿಜ್ಞೆಯನ್ನು ಸ್ವೀಕರಿಸಿದರು.ವೀರಾಜಪೇಟೆ: ವೀರಾಜಪೇಟೆ ತಾಲೂಕಿನಾದ್ಯಂತ ೨೫ ಸಾವಿರ ಮಂದಿ ಸಂವಿಧಾನ ಪೀಠಿಕೆಯನ್ನು ಏಕಕಾಲದಲ್ಲಿ ವಾಚಿಸಿದರು. ಸಂವಿಧಾನದ ಮಹತ್ವ ಅರಿಯಬೇಕಾದರೆ ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಸಂವಿಧಾನದ ಮೌಲ್ಯವನ್ನು ತಿಳಿಸಬೇಕು ಎಂದು ಶಿಕ್ಷಣಾಧಿಕಾರಿ ಎಂ. ಪ್ರಕಾಶ್ ಹೇಳಿದರು.

ನಗರದ ಪುರಭವನದಲ್ಲಿ ಏರ್ಪಡಿಸಲಾಗಿದ್ದ ಅಂತರರಾಷ್ಟಿçÃಯ ಪ್ರಜಾಪ್ರಭುತ್ವ ದಿನವನ್ನು ಉದ್ದೇಶಿಸಿ ಮಾತನಾಡಿದ ಅವರು ಸರ್ಕಾರದ ನಿರ್ದೇಶನದಂತೆ ಶಾಲೆಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಅಳವಡಿಸುವ ಕೆಲಸಕ್ಕೆ ಚಾಲನೆ ನೀಡಲಾಗಿದೆ. ಇನ್ನೂ ಹೆಚ್ಚಿನ ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನದ ಬಗ್ಗೆ ಜ್ಞಾನ ಹೆಚ್ಚಿಸುವ ಕಾರ್ಯಕ್ರಮಗಳಿಗೆ ಕ್ರೀಯಾಯೋಜನೆಗಳನ್ನು ಶಿಕ್ಷಣ ಇಲಾಖೆ ತಯಾರು ಮಾಡುತ್ತಿದೆ ಎಂದರು. ಸರ್ವೋದಯ ಶಿಕ್ಷಣ ಸಂಸ್ಥೆಯ ಉಪನ್ಯಾಸಕ ಗಿರೀಶ್ ಹೆಚ್.ಎಂ ಮುಖ್ಯ ಸಂವಿಧಾನದ ಬಗ್ಗೆ ಉಪನ್ಯಾಸ ನೀಡಿದರು.

ವೇದಿಕೆಯಲ್ಲಿ ವೀರಾಜಪೇಟೆ ತಾಲೂಕು ತಹಶೀಲ್ದಾರ್ ರಾಮಚಂದ್ರ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಪ್ರೀತಿ ಚಿಕ್ಕಮಾದಯ್ಯ ಡಿವೈಎಸ್ಪಿ ಮೋಹನ್ ಕುಮಾರ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಮೊದಲಿಗೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಅತಿಥಿ ಗಣ್ಯರು ನೆರವೇರಿಸಿದರು. ವೀರಾಜಪೇಟೆ ತಾಲೂಕು ದಂಡಾಧಿಕಾರಿ ರಾಮಚಂದ್ರ ಸಭಿಕರಿಗೆ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು. ಇಲಾಖಾ ಮುಖ್ಯಸ್ಥರು, ವಿವಿಧ ಸಂಘಟನೆಗಳ ಮುಖಂಡರು, ಶಿಕ್ಷಕರು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.ಚೆಯ್ಯಂಡಾಣೆ: ಸ್ಥಳೀಯ ನರಿಯಂದಡ ಕೇಂದ್ರ ಪ್ರೌಢ ಶಾಲೆಯಲ್ಲಿ ವಿಶ್ವ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಯಿತು. ವಿಶ್ವ ಮತದಾರರ ಸಾಕ್ಷರತಾ ಕ್ಲಬ್ ವತಿಯಿಂದ ವಿಶ್ವ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಂವಿದಾನದ ಮಹತ್ವದ ಕುರಿತು ಶಾಖೆಯ ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.

ಈ ಸಂದರ್ಭ ಸಾಕ್ಷರತಾ ಕ್ಲಬ್ ನ ಸಂಚಾಲಕ ಶಿಕ್ಷಕಿ ಬಿ.ಪಿ. ಸುನೀತಾ ಸಂವಿದಾನದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಈ ಸಂದರ್ಭ ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.