ಮಡಿಕೇರಿ, ಸೆ. ೨೩: ವಿಕಲ ಚೇತನರ ಹಾಗೂ ಹಿರಿಯ ನಾಗರಿ ಕರ ಸಬಲೀಕರಣ ಇಲಾಖೆಯಿಂದ ಅಕ್ಟೋಬರ್ ೧ ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಯನ್ನು ಜಿಲ್ಲಾ ಮಟ್ಟದಲ್ಲಿ ಕೊಡಗು ಜಿಲ್ಲೆಯಲ್ಲಿ ಆಚರಿಸುವ ಸಂಬAಧ ಕೊಡಗು ಜಿಲ್ಲೆಯ ಹಿರಿಯ ನಾಗರಿಕರಿಗೆ ಆಟೋಟ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವು ನಗರದ ಗಾಂಧಿ ಮೈದಾನದಲ್ಲಿ ಸೆಪ್ಟೆಂಬರ್ ೨೭ ರಂದು ಬೆಳಗ್ಗೆ ೧೦.೩೦ ಗಂಟೆಗೆ ನಡೆಯಲಿದೆ.

ಹಿರಿಯ ನಾಗರಿಕರಿಗೆ ಕ್ರೀಡೆ (ನಡಿಗೆ, ರಿಂಗ್‌ನ್ನು ಬಕೆಟ್‌ನಲ್ಲಿ ಎಸೆಯುವುದು, ಮ್ಯೂಸಿಕಲ್ ಚೇರ್) ಮತ್ತು ಸಾಂಸ್ಕೃತಿಕ ಕಾರ್ಯಕ್ರಮ (ಏಕಪಾತ್ರಾಭಿನಯ, ಗಾಯನ ಸ್ಪರ್ಧೆ (ಭಾವಗೀತೆ) ಮತ್ತು ಚಿತ್ರಕಲೆ) ಸ್ಪರ್ಧೆಗಳನ್ನು ವಯೋಮಿತಿವಾರು (೬೦-೬೯, ೭೦-೭೯ ಹಾಗೂ ೮೦ ವರ್ಷ ಮೇಲ್ಪಟ್ಟು) ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವ ಹಿರಿಯ ನಾಗರಿಕರು ಸ್ಪರ್ಧೆಯ ದಿನದಂದು ವಯಸ್ಸಿನ ದೃಢೀಕರಣಕ್ಕಾಗಿ ಆಧಾರ್ ಕಾರ್ಡ್/ ಡಿಎಲ್/ ಪಡಿತರ ಚೀಟಿ / ಓಟರ್ ಐಡಿ ಇವುಗಳಲ್ಲಿ ಯಾವುದಾದರು ಒಂದರ ನಕಲು ಪ್ರತಿ ತರುವುದು. ಕೊಡಗು ಜಿಲ್ಲೆಯ ಹಿರಿಯ ನಾಗರಿಕರು ಸ್ಪರ್ಧೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸು ವಂತೆ ಕೋರಿದೆ. ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ. ೦೮೨೭೨-೨೯೫೮೨೯ ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.