ಪೊನ್ನಂಪೇಟೆ, ಸೆ. ೨೪: ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆ ಟರ್ಫ್ ಮೈದಾನದಲ್ಲಿ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ವಿದ್ಯಾನಿಕೇತನ ಪದವಿ ಪೂರ್ವ ಕಾಲೇಜು ವತಿಯಿಂದ ಆಯೋಜಿಸಲಾಗಿದ್ದ ವೀರಾಜಪೇಟೆ ತಾಲೂಕು ಮಟ್ಟದ ಹಾಕಿ ಲೀಗ್ ಪಂದ್ಯಾವಳಿಯಲ್ಲಿ ವೀರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜು, ಗೋಣಿಕೊಪ್ಪಲು ಕಾವೇರಿ ಪದವಿ ಪೂರ್ವ ಕಾಲೇಜು ವಿರುದ್ಧ ೩-೧ ಗೋಲುಗಳ ಜಯಭೇರಿ ಬಾರಿಸಿ ಚಾಂಪಿಯನ್ ಪಟ್ಟ ಮುಡಿಗೇರಿಸಿ ಕೊಂಡಿತು. ಗೋಣಿಕೊಪ್ಪಲು ಪದವಿ ಪೂರ್ವ ಕಾಲೇಜು ರನ್ನರ್ ಸ್ಥಾನಕ್ಕೆ ತೃಪ್ತಿ ಪಟ್ಟು ಕೊಂಡಿತು. ವಿಜೇತ ವೀರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜು ಪರ ಸಜನ್ ಗಣಪತಿ, ಲಿಖಿತ್, ಹೇಮಂತ್ ತಲಾ ಒಂದೊAದು ಗೋಲು ಹೊಡೆದು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಪರಾಜಿತ ತಂಡದ ಪರ ರೆವಿನ್ ಭೀಮಯ್ಯ ಏಕೈಕ ಗೋಲು ಬಾರಿಸಿ ಸೋಲಿನ ಅಂತರ ತಗ್ಗಿಸಿದರು. ಪಂದ್ಯಾವಳಿಯಲ್ಲಿ ವಿದ್ಯಾನಿಕೇತನ ಪದವಿಪೂರ್ವ ಕಾಲೇಜು, ಹಳ್ಳಿಗಟ್ಟು ಸಿಐಪಿಯು ಕಾಲೇಜು, ಲಯನ್ಸ್ ಪದವಿ ಪೂರ್ವ ಕಾಲೇಜು, ಎಸ್.ಎಂ.ಎಸ್ ಪದವಿ ಪೂರ್ವ ಕಾಲೇಜು, ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜು ಸೇರಿದಂತೆ ಒಟ್ಟು ೭ ತಂಡಗಳು ಭಾಗವಹಿಸಿದ್ದವು. ರಾಷ್ಟಿçÃಯ ಬಾಸ್ಕೆಟ್ ಬಾಲ್ ಆಟಗಾರ ಚೋಯಮಾಡಂಡ ಸನ್ನು ಗಣಪತಿ ಬಹುಮಾನ ವಿತರಿಸಿದರು. ಈ ಸಂದರ್ಭ ಗೋಣಿಕೊಪ್ಪಲು ಕಾವೇರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಸ್.ಎಸ್.ಮಾದಯ್ಯ, ವಿದ್ಯಾನಿಕೇತನ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಸಂತೋಷ್ ಕುಮಾರ್, ದೈಹಿಕ ಶಿಕ್ಷಣ ನಿರ್ದೇಶಕರಾದ ಎಂ.ಟಿ. ಸಂತೋಷ್, ಕೇಚೆಟ್ಟಿರ ತಮ್ಮಯ್ಯ, ರಾಜ ರೈ, ಚಂದ್ರಶೇಖರ್, ಪೊನ್ನಂಪೇಟೆ ಕ್ರೀಡಾ ವಸತಿ ನಿಲಯದ ತರಬೇತುದಾರರದ ಕುಪ್ಪಂಡ ಸುಬ್ಬಯ್ಯ, ಮೂಕಳಮಾಡ ಗಣಪತಿ, ವಾರ್ಡನ್ ದಿನೇಶ್, ಹಾಕಿ ತರಬೇತುದಾರ ಮಿನ್ನಂಡ ಜೋಯಪ್ಪ ಇನ್ನಿತರರು ಇದ್ದರು. ತೀರ್ಪುಗಾರರಾಗಿ ಗಣಪತಿ, ಮಿಲನ್, ಗುರು ಪ್ರಸಾದ್, ಅಯ್ಯಪ್ಪ, ತಮ್ಮಯ್ಯ ಕಾರ್ಯನಿರ್ವಹಿಸಿದರು.