ಕುಶಾಲನಗರ, ಸೆ. ೨೪: ಕರ್ನಾಟಕ ಸುವರ್ಣ ಸಂಭ್ರಮ ಅಂಗವಾಗಿ ಕುಶಾಲನಗರದ ಕನ್ನಡ ಸಿರಿ ಸ್ನೇಹ ಬಳಗದ ಆಶ್ರಯದಲ್ಲಿ ಕನ್ನಡ ನುಡಿ, ಸಂಸ್ಕೃತಿ, ಭಾಷೆ ಮತ್ತಿತರ ಚಟುವಟಿಕೆಗಳನ್ನು ಒಳಗೊಂಡ ೫೦ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಬಳಗದ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ತಿಳಿಸಿದ್ದಾರೆ.

ಕುಶಾಲನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು ವಿದ್ಯಾರ್ಥಿಗಳು, ಸಾಹಿತಿಗಳು, ಕಲಾವಿದರು, ರೈತರನ್ನು ಗುರುತಿಸಿ ಅವರ ಪ್ರತಿಭೆಗಳನ್ನು ಹೊರ ತರುವ ಕೆಲಸ ಬಳಗದಿಂದ ನಡೆಯಲಿದೆ ಎಂದು ಹೇಳಿದರು. ಕನ್ನಡದ ಸಂಸ್ಕೃತಿ ಬಗ್ಗೆ ಯುವ ಪೀಳಿಗೆಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸುವುದು. ಆ ಮೂಲಕ ಮಕ್ಕಳಲ್ಲಿ ಭಾಷಾ ಜಾಗೃತಿ ಬೆಳೆಸುವುದು ಬಳಗದ ಪ್ರಮುಖ ಉದ್ದೇಶವಾಗಿದೆ ಎಂದರು.

ಈ ಸಾಲಿನ ಪ್ರಥಮ ಕಾರ್ಯಕ್ರಮವಾಗಿ ಬಳಗ ಕೊಡಗು ಜಿಲ್ಲೆಯ ಕರ್ನಾಟಕ ಲೇಖಕಿಯರ ಸಂಘದ ಸಂಯುಕ್ತ ಆಶ್ರಯದಲ್ಲಿ ಸಿರಿ ಸಂಭ್ರಮ ಕವಿಗೋಷ್ಠಿ ಹಾಗೂ ಕೃತಿ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಂಡಿದೆ.

ತಾ.೨೮ ರಂದು ಕುಶಾಲನಗರ ಸಮೀಪದ ಕಾವೇರಿ ನಿಸರ್ಗಧಾಮ ಪ್ರವಾಸಿ ಕೇಂದ್ರದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಕರ್ನಾಟಕ ಸುವರ್ಣ ಸಂಭ್ರಮ ಅಂಗವಾಗಿ ನಡೆಯುವ ಕಾರ್ಯಕ್ರಮಗಳಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳುವಂತೆ ಲೋಕೇಶ್ ಸಾಗರ್ ಕೋರಿದರು.

ಈ ಸಂದರ್ಭ ಬಳಗದ ಪ್ರಮುಖರಾದ ಎಂ.ಡಿ. ರಂಗಸ್ವಾಮಿ, ಹೆಚ್.ಎನ್. ರಾಮಚಂದ್ರ, ಎನ್.ಆರ್. ನಾಗೇಶ್, ಬಿ.ಎ. ನಾಗೇಗೌಡ ಇದ್ದರು.