ವೀರಾಜಪೇಟೆ, ಸೆ. ೨೪: ವಿದ್ಯಾರ್ಥಿಗಳು ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ವೀರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ.ಸಿ. ದಯಾನಂದ ಕರೆಯಿತ್ತರು.
ವೀರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್. ಎಸ್.ಎಸ್ ಹಾಗೂ ಯುವ ರೆಡ್‌ಕ್ರಾಸ್ ಘಟಕಗಳ ಉದ್ಘಾಟನೆ ಹಾಗೂ ಮಾಹಿತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿ ವಿದ್ಯಾರ್ಥಿಗಳು ಸಮಾಜಮುಖಿ ಕಾರ್ಯದಲ್ಲಿ ತೊಡಗಬೇಕು. ರಾಷ್ಟçದ ಪ್ರಗತಿಗೆ ಶ್ರಮಿಸಬೇಕು ಎಂದರು. ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕರಾದ ರೆ. ಫಾ. ಐಸಾಕ್ ರತ್ನಕರ್ ಪ್ರತಿಜ್ಞಾ ವಿದಿ ಭೋದಿಸಿ ಮಾತನಾಡಿ, ಎನ್.ಎಸ್.ಎಸ್ ಹಾಗೂ ಯುವ ರೆಡ್ ಕ್ರಾಸ್ ಘಟಕಗಳ ಕಾರ್ಯ ಒಂದೇ ಆಗಿದ್ದು ಅದು ಸಮಾಜದ ಸೇವೆಯಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ಸ್ವಯಂ ಸೇವಾ ವಿದ್ಯಾರ್ಥಿಗಳು ಸ್ವೀಕರಿಸಿದ ಪ್ರತಿಜ್ಞೆಯನ್ನು ದಿನನಿತ್ಯ ಅಳವಡಿಸಿಕೊಳ್ಳಬೇಕು ಎಂದರು. ಕಾಲೇಜಿನ ಎನ್.ಎಸ್.ಎಸ್. ಅಧಿಕಾರಿ ಬಿ.ಎನ್. ಶಾಂತಿಭೂಷಣ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ವೇದಿಕೆಯಲ್ಲಿ ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಹೇಮ ಬಿ.ಡಿ. ಯುವ ರೆಡ್ ಕ್ರಾಸ್ ಘಟಕದ ಅಧಿಕಾರಿ ವಿಲೀನ ಗೋನ್ಸಾಲ್ವೇಸ್ ಉಪಸ್ಥಿತರಿದ್ದರು. ಕಾಲೇಜಿನ ಎನ್.ಎಸ್.ಎಸ್, ರೆಡ್ ಕ್ರಾಸ್ ಘಟಕದ ನಾಯಕರುಗಳು, ವಿದ್ಯಾರ್ಥಿಗಳು, ಉಪನ್ಯಾಸಕರು ಹಾಜರಿದ್ದರು.