ಮಡಿಕೇರಿ, ಸೆ. ೨೪: ಮುಂಬರಲಿರುವ ಲೋಕಸಭಾ ಚುನಾವಣೆಗೆ ಸಂಬAಧಿಸಿದAತೆ ಲೋಕಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಅಗತ್ಯ ಮಾಹಿತಿ ಸಂಗ್ರಹಿಸಿ ವರದಿ ನೀಡಲು ಕಾಂಗ್ರೆಸ್ ಪಕ್ಷ ವಿವಿಧ ಜಿಲ್ಲೆಗಳಿಗೆ ಸಚಿವರುಗಳನ್ನು ವೀಕ್ಷಕರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ. ರಾಜ್ಯದ ೨೮ ಜಿಲ್ಲೆಗಳಿಗೆ ವಿವಿಧ ಸಚಿವರುಗಳನ್ನು ನೇಮಕ ಮಾಡಿ ಕೆ.ಪಿ.ಸಿ.ಸಿ. ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಕಟಣೆ ಹೊರಡಿಸಿದ್ದಾರೆ. ಇದರಂತೆ ಕೊಡಗು- ಮೈಸೂರು ಕ್ಷೇತ್ರಕ್ಕೆ ನಗರಾಭಿವೃದ್ಧಿ ಸಚಿವ ಭೈರತಿ ಎಸ್. ಸುರೇಶ್ ಅವರನ್ನು ನೇಮಕ ಮಾಡಲಾಗಿದೆ.