ಭಾಗಮಂಡಲ, ಸೆ. ೨೪: ಭಾಗಮಂಡಲದ ಶ್ರೀ ಕಾವೇರಿ ಆಟೋ ಚಾಲಕ ಸಂಘದ ವತಿಯಿಂದ ರಕ್ತದಾನ ಶಿಬಿರ ಹಾಗೂ ಸ್ವಚ್ಛ ಕಾವೇರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ತಾ. ೨೬ರಂದು ಭಾಗಮಂಡಲದಿAದ ತಲಕಾವೇರಿವರೆಗೆ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಪ್ರಯುಕ್ತ ರಕ್ತದಾನ ಶಿಬಿರವನ್ನು ಅದೇ ದಿನ ಏರ್ಪಡಿಸಲಾಗಿದೆ. ಸ್ವಚ್ಛತಾ ಕಾರ್ಯಕ್ರಮಕ್ಕೆ ಬೆಳಿಗ್ಗೆ ೧೧ ಗಂಟೆಗೆ ಭಾಗಮಂಡಲದ ಮುಖ್ಯ ದ್ವಾರದ ಬಳಿ ಚಾಲನೆ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.