ಪಾಲಿಬೆಟ್ಟ, ಸೆ. ೨೫: ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ ಎಂದು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಮುಕೊಂಡ ವಿಜು ಸುಬ್ರಮಣಿ ಹೇಳಿದರು.

ಪಾಲಿಬೆಟ್ಟ ಲೂರ್ಡ್ಸ್ ಹಿಲ್ ಶಾಲೆಯ ಸಭಾಂಗಣದಲ್ಲಿ ನಡೆದ ಪ್ರತಿಭಾ ಕಾರಂಜಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರ್ಕಾರಗಳ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳು ತಮ್ಮ ಕಲೆ ಪ್ರತಿಭೆಯನ್ನು ಪ್ರದರ್ಶಿಸುವ ಮೂಲಕ ಪ್ರತಿಭಾನ್ವಿತರಾಗಿ ಗುರುತಿಸಿಕೊಳ್ಳಬೇಕೆಂದರು.

ವೀರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಪ್ರಕಾಶ್ ಮಾತನಾಡಿ, ಪಾಲಿಬೆಟ್ಟ ಕ್ಲಸ್ಟರ್ ವ್ಯಾಪ್ತಿಯ ೧೦ಕ್ಕೂ ಹೆಚ್ಚು ಶಾಲೆಯ ನೂರಾರು ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿ ಕಲೋತ್ಸವದಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವ ಮೂಲಕ ಗಮನ ಸೆಳೆದಿದ್ದಾರೆ ಎಂದರು.

ಲೂರ್ಡ್ಸ್ ಹಿಲ್ ಶಾಲಾ ವ್ಯವಸ್ಥಾಪಕರಾದ ಸಿಸ್ಟರ್ ಮೆಲನಿ ಅಧ್ಯಕ್ಷತೆ ವಹಿಸಿದ್ದರು. ಪಾಲಿಬೆಟ್ಟ ಕ್ಲಸ್ಟರ್ ಅಧಿಕಾರಿ ಕರುಂಬಯ್ಯ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲಿಬೆಟ್ಟ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ರೇಖಾ ಗಣಪತಿ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಅಜಿತ್ ಕರುಂಬಯ್ಯ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವಸಂತ್, ಸಮಾಜ ಸೇವಕ ಡಾ ಎ.ಸಿ. ಗಣಪತಿ, ವೀರಾಜಪೇಟೆ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಂದ್ರ, ಲೂರ್ಡ್ಸ್ ಹಿಲ್ ಶಾಲಾ ಮುಖ್ಯೋಪಾಧ್ಯರಾದ ಸಿಸ್ಟರ್ ಐರಿಸ್, ಪ್ಲೂರಟ್, ಎಸ್ಸಿ ಎಸ್ ಟಿ. ನೌಕರರ ಸಮನ್ವಯ ಸಮಿತಿ ಅಧ್ಯಕ್ಷ ಮಹೇಶ್, ಮತ್ತಿತರರು ಹಾಜರಿದ್ದರು.