ನಾಪೋಕ್ಲು, ಸೆ. ೨೫: ಜನರ ಶ್ರೇಯೋಭಿವೃದ್ಧಿಗೆ ಜಾರಿಯಾದ ಗ್ಯಾರಂಟಿ ಯೋಜನೆಗಳು ಪಾರದರ್ಶಕವಾಗಿದ್ದು, ಇದಕ್ಕೆ ಯಾರು ಹಣ ನೀಡುವಂತಿಲ್ಲ. ಯಾರಾದರೂ ಹಣ ಪಡೆದಲ್ಲಿ ಅಂತವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ರಾಜ್ಯ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಎಚ್ಚರಿಸಿದರು.

ಸಮೀಪದ ಚೆರಿಯಪರಂಬು ಶಹದಿ ಮಹಲ್ ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶದ ಜನರ ಸಮಸ್ಯೆಯನ್ನು ಆಲಿಸುವ, ಪರಿಹರಿಸುವ ಹಾಗೂ ಸರಕಾರದ ಯೋಜನೆಗಳನ್ನು ಸಾರ್ವಜನಿಕರಿಗೆ ತಿಳಿಸುವ ಉದ್ದೇಶದಿಂದ ರಾಜ್ಯದ ಮುಖ್ಯಮಂತ್ರಿಗಳ ಆದೇಶದಂತೆ ರಾಜ್ಯಾದ್ಯಂತ ಸಚಿವರು, ಶಾಸಕರು, ಸರಕಾರದ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಜನತಾ ದರ್ಶನ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಇಂದು ಇದನ್ನು ಕೊಡಗು ಜಿಲ್ಲೆಯಲ್ಲಿ ಮೊದಲ ಬಾರಿಗೆ ಉದ್ಘಾಟಿಸಲಾಗಿದೆ ಎಂದರು.

ಸಾಮಾನ್ಯ ಜನರ, ಸಾರ್ವಜನಿಕರ ಅರ್ಜಿಗಳನ್ನು ಈ ಸಂದರ್ಭದಲ್ಲಿ ಸ್ವೀಕರಿಸಲಾಗುತ್ತಿದ್ದು, ಜಿಲ್ಲೆಯ ವಿವಿಧ ಇಲಾಖೆಗಳಿಗೆ ಸಂಬAಧಿಸಿದ ಅರ್ಜಿಗಳನ್ನು ಇಲಾಖಾವಾರು ಪ್ರತ್ಯೇಕಿಸಿ ನೀಡಲಾಗುವುದು. ರಾಜ್ಯಮಟ್ಟಕ್ಕೆ

(ಮೊದಲ ಪುಟದಿಂದ) ಸಂಬAಧಿಸಿದ ಅರ್ಜಿಗಳಾಗಿದ್ದರೆ ರಾಜ್ಯ ಕಾರ್ಯದರ್ಶಿಯ ಮೂಲಕ ಸರಕಾರಕ್ಕೆ ತಲುಪಿಸಿ ಅದಕ್ಕೆ ಸೂಕ್ತ ಪರಿಹಾರ ನೀಡಲಾಗುವುದು ಎಂದರು. ಸರಕಾರದ ಐದು ಗ್ಯಾರೆಂಟಿಗಳಲ್ಲಿ ನಾಲ್ಕು ಗ್ಯಾರೆಂಟಿಗಳನ್ನು ಜಾರಿಗೊಳಿಸಲಾಗಿದೆ. ಕೊಡಗು ಜಿಲ್ಲೆಯ ೫೫ ಲಕ್ಷ ಮಹಿಳೆಯರು ಉಚಿತವಾಗಿ ರಾಜ್ಯದೆಲ್ಲೆಡೆ ಸರಕಾರಿ ಬಸ್‌ಗಳಲ್ಲಿ ಸಂಚರಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಗೃಹಜ್ಯೋತಿಯಲ್ಲಿ ಕೊಡಗು ಜಿಲ್ಲೆಯ ಗ್ರಾಹಕರ ೬.೬೫ ಕೋಟಿ ರೂ.ಗಳನ್ನು ಸರಕಾರ ಭರಿಸುತ್ತಿದೆ. ಮಹಿಳೆಯರಿಗೆ ಗೃಹಲಕ್ಷಿö್ಮ ಯೋಜನೆಯಲ್ಲಿ ೨ ಸಾವಿರ ರೂ.ಗಳನ್ನು ನೀಡುತ್ತಿದ್ದು, ೧,೧೪,೪೨೦ ಲಕ್ಷ ರೂ.ಗಳನ್ನು ನೀಡಲಾಗಿದೆ. ಅನ್ನಭಾಗ್ಯ ಯೋಜನೆಯಡಿಯಲ್ಲಿ ೧.೧೪ ಲಕ್ಷ ಜನರಿಗೆ ಅಕ್ಕಿ ವಿತರಿಸಲಾಗುತ್ತಿದೆ. ಈ ಯೋಜನೆಗಳು ಶೇ. ೧೦೦ರಷ್ಟು ಪಾರದರ್ಶಕವಾಗಿದ್ದು, ೧ ರೂಪಾಯಿ ಕೂಡ ಲಂಚ ನೀಡಲಾಗಿಲ್ಲ. ಈ ಬಗ್ಗೆ ದೂರಿದ್ದರೆ ಜನತಾ ದರ್ಶನದಲ್ಲಿ ದೂರು ನೀಡಬಹುದು ಎಂದರು.

ಜಿಲ್ಲೆಯ ವಿವಿಧ ಇಲಾಖೆಗಳ ಬಗ್ಗೆ ವೈಯಕ್ತಿಕ ಹಾಗೂ ಸಾಮಾಜಿಕವಾಗಿ ಸಮಸ್ಯೆಯಿದ್ದರೆ ದೂರು ನೀಡಬಹುದು. ಎಲ್ಲರ ಸಹಕಾರದಿಂದ ಜಿಲ್ಲೆಯ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವೀರಾಜಪೇಟೆ ವಿಧಾನಸಭಾ ಕ್ಷೇತ್ರ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಮಾತನಾಡಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸೂಚನೆ ಮೇರೆಗೆ ಜನತಾ ದರ್ಶನ ಕಾರ್ಯಕ್ರಮ ನಡೆಸಲಾಗುತ್ತಿದೆ. ಪ್ರತಿ ತಿಂಗಳು ಜಿಲ್ಲೆಯ ಒಂದೊAದು ತಾಲೂಕುಗಳಲ್ಲಿ ಈ ಕಾರ್ಯಕ್ರಮವನ್ನು ನಡೆಸಲಾಗುವುದು. ಸಾಮಾನ್ಯ ಜನರ ಮನೆ ಬಾಗಿಲಿಗೆ ತೆರಳಿ ಅವರ ಸಮಸ್ಯೆಗಳನ್ನು ಆಲಿಸಿ ಅದಕ್ಕೆ ಪರಿಹಾರ ಕಂಡುಕೊಳ್ಳುವುದು ನಮ್ಮ ಈ ಸರಕಾರದ ಉದ್ದೇಶವಾಗಿದೆ. ಕಾವೇರಿ ನದಿ ತೀರದಲ್ಲಿ ತಾಜ್ಯ ಹಾಕುತ್ತಿರುವ ಸಮಸ್ಯೆ ಗಂಭೀರವಾಗಿದೆ. ಇದಕ್ಕೆ ಪರಿಹಾರ ನೀಡುವ ನಿಟ್ಟಿನಲ್ಲಿ ಸಂಬAಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎನ್.ವಿ.ಪ್ರಸಾದ್ ಮಾತನಾಡಿ ಅಕ್ರಮ ಸಕ್ರಮ, ಆನೆ ಹಾವಳಿ ಬಗ್ಗೆ ಸಂಬAಧಿಸಿದ ಮಂತ್ರಿಗಳೊAದಿಗೆ ಚರ್ಚಿಸಿ ಪರಿಹಾರ ಕೈಗೊಳ್ಳಲಾಗುವುದು. ಕಾವೇರಿ ನದಿಗೆ ತ್ಯಾಜ್ಯ ಹಾಕುವ ಬಗ್ಗೆ ದೂರುಗಳಿದ್ದು, ಈ ಬಗ್ಗೆ ಸಂಬAಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದರು.

ಸಾರ್ವಜನಿಕರಿಗೆ ವಿವಿಧ ಇಲಾಖೆಗಳಿಂದ ದೊರೆಯಬಹುದಾದ ಸವಲತ್ತುಗಳ ಬಗ್ಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ಕೈಮಗ್ಗ ಮತ್ತು ಜವಳಿ ಇಲಾಖೆ, ಗ್ರಾಮೀಣ ಕೈಗಾರಿಕಾ ವಿಭಾಗ, ಸಂಜೀವಿನಿ ಒಕ್ಕೂಟ, ಶಕ್ತಿ ಯೋಜನೆ, ಜಿಲ್ಲಾ ಆಯುಷ್ ಇಲಾಖೆ, ಪಶು ಪಾಲನ ಮತ್ತು ಪಶು ವೈದ್ಯ ಸೇವಾ ಇಲಾಖೆಗಳ ವತಿಯಿಂದ ಪ್ರದರ್ಶನ ಮಳಿಗೆಗಳನ್ನು ತೆರೆಯಲಾಗಿತ್ತು.

ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪೌಷ್ಟಿಕ ಆಹಾರಗಳ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪೋಷಣ್ ಅಭಿಯಾನದ ಮಳಿಗೆ ತೆರೆಯಲಾಗಿದ್ದು, ಅದನ್ನು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಉದ್ಘಾಟಿಸಿದರು. ನಂತರ ಸಾರ್ವಜನಿಕರಿಗೆ ಪೌಷ್ಟಿಕ ಆಹಾರಗಳನ್ನು ವಿತರಿಸಲಾಯಿತು. ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ೧೬೪ ಅರ್ಜಿಗಳನ್ನು ಸ್ವೀಕರಿಸಲಾಯಿತು.

ವೇದಿಕೆಯಲ್ಲಿ ಜಿಲ್ಲಾಧಿಕಾರಿ ವೆಂಕಟರಾಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ, ನಾಪೋಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ, ಮತ್ತಿತರರು ಇದ್ದರು.

ಕರ್ನಾಟಕ ಪಬ್ಲಿಕ್ ಶಾಲಾ ವಿದ್ಯಾರ್ಥಿಗಳಿಂದ ನಾಡಗೀತೆ, ಅಪರ ಜಿಲ್ಲಾಧಿಕಾರಿ ವೀಣಾ ಸ್ವಾಗತ, ಊ.ರಾ.ನಾಗೇಶ್ ನಿರೂಪಿಸಿ, ಜಿಲ್ಲಾ ಉಪವಿಭಾಗಾಧಿಕಾರಿ ಯತೀಶ್ ಉಲ್ಲಾಳ್ ವಂದಿಸಿದರು. -ಪಿ.ವಿ.ಪ್ರಭಾಕರ್