ಕುಶಾಲನಗರ, ಸೆ. ೨೫: ಪೌರಕಾರ್ಮಿಕರು ಮತ್ತು ಅಧಿಕಾರಿ ಸಿಬ್ಬಂದಿಗಳ ಬದ್ಧತೆಯ ಕೆಲಸದ ಮೂಲಕ ಕುಶಾಲನಗರ ಪುರಸಭೆ ಸ್ವಚ್ಛತೆಯಲ್ಲಿ ಮೇಲುಗೈ ಸಾಧಿಸಿದೆ ಎಂದು ಮಡಿಕೇರಿ ಉಪ ವಿಭಾಗಾಧಿಕಾರಿ ಹಾಗೂ ಕುಶಾಲನಗರ ಪುರಸಭೆ ಆಡಳಿತ ಅಧಿಕಾರಿ ಡಾ. ಯತೀಶ್ ಉಳ್ಳಾಲ್ ಹೇಳಿದರು.

ಕುಶಾಲನಗರದಲ್ಲಿ ನಡೆದ ಪೌರಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ನಗರದ ಸ್ವಚ್ಛತೆಯಲ್ಲಿ ಪೌರಕಾರ್ಮಿಕರ ಪಾತ್ರ ಪ್ರಮುಖವಾಗಿದೆ. ಕಾರ್ಮಿಕರು ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು. ಪಟ್ಟಣದಲ್ಲಿ ಲಭ್ಯವಿರುವ ಎರಡು ಎಕರೆ ವಿಸ್ತೀರ್ಣದ ಜಾಗದಲ್ಲಿ ಪ್ರಥಮ ಹಂತದಲ್ಲಿ ನಿವೇಶನ ಒದಗಿಸುವ ಯೋಜನೆ ನಂತರ ಮನೆ ನಿರ್ಮಾಣ ಮಾಡಿಕೊಡುವ ಬಗ್ಗೆ ಭರವಸೆ ವ್ಯಕ್ತಪಡಿಸಿದರು.

ಈ ಸಂದರ್ಭ ಮಾತನಾಡಿದ ಮುಖ್ಯ ಅಧಿಕಾರಿ ಕೃಷ್ಣಪ್ರಸಾದ್, ಪೌರಕಾರ್ಮಿಕರು ಆರ್ಥಿಕವಾಗಿ ಶ್ರೀಮಂತರಾಗದಿದ್ದರೂ, ಅವರು ನಿರ್ವಹಿಸುವ ಕೆಲಸದಲ್ಲಿ ಶ್ರೀಮಂತಿಕೆ ಎದ್ದು ಕಾಣುತ್ತಿದೆ ಎಂದ ಅವರು ಪೌರಕಾರ್ಮಿಕರು ದಿನನಿತ್ಯ ಸಾಮಾಜಿಕವಾಗಿ ಕೊಡುಗೆ ನೀಡುತ್ತಿದ್ದಾರೆ ಎಂದರು.

ಸಭೆಯಲ್ಲಿ ಉಪಸ್ಥಿತರಿದ್ದ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಗಣೇಶ್ ಮಾತನಾಡಿ ಕಾರ್ಮಿಕರಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಸರ್ಕಾರ ಒದಗಿಸುತ್ತಿದೆ. ಪ್ರತಿಯೊಬ್ಬರಿಗೂ ವಸತಿ ಸೌಕರ್ಯದ ಅಗತ್ಯವಿದ್ದು ಈ ಬಗ್ಗೆ ಸಂಬAಧಿಸಿದವರು ಕ್ರಮ ಕೈಗೊಳ್ಳ ಬೇಕು ಎಂದು ಮನವಿ ಮಾಡಿದರು. ವರ್ಷವಿಡೀ ಕೆಲಸ ಕಾರ್ಯ ನಿರ್ವಹಿಸುವ ಪೌರಕಾರ್ಮಿಕರ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನಪ್ರತಿನಿಧಿಗಳು ಪಾಲ್ಗೊಳ್ಳದ ಬಗ್ಗೆ ಅವರು ವಿಷಾದ ವ್ಯಕ್ತಪಡಿಸಿದರು.

ಪುರಸಭೆ ಮಾಜಿ ಅಧ್ಯಕ್ಷರಾದ ಜಯವರ್ಧನ್, ಡಿ.ಕೆ. ತಿಮ್ಮಪ್ಪ, ಸದಸ್ಯರಾದ ವಿ.ಎಸ್. ಆನಂದ್ ಕುಮಾರ್, ಪ್ರಮೋದ್ ಮುತ್ತಪ್ಪ ರೂಪ ಉಮಾಶಂಕರ್, ಜಯಲಕ್ಷಿö್ಮ, ಶೈಲ ಕೃಷ್ಣಪ್ಪ, ಜಯಲಕ್ಷö್ಮಮ್ಮ, ದಿನೇಶ್, ಸಂಘದ ಕಾರ್ಯದರ್ಶಿ ರಶ್ಮಿ ಮತ್ತಿತರರು ಇದ್ದರು.

ಕಾರ್ಯಕ್ರಮದಲ್ಲಿ ಪೌರಕಾರ್ಮಿಕರು ಮತ್ತು ಸಿಬ್ಬಂದಿಗಳಿಗೆ ನಡೆದ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ದಿನಾಚರಣೆ ಅಂಗವಾಗಿ ಕಾರ್ಮಿಕರಿಗೆ ವಿಶೇಷ ಭತ್ಯೆ ನೀಡಲಾಯಿತು.

ದಫೇದಾರ್ ಮೋಹನ್ ಕುಮಾರ್ ಸೇರಿದಂತೆ ಕುಶಾಲನಗರ ಪುರಸಭೆಯ ಕಾರ್ಮಿಕರು, ನೌಕರರು ಸಭೆಯಲ್ಲಿ ಪಾಲ್ಗೊಂಡಿದ್ದರು. ಪುರಸಭೆ ಆರೋಗ್ಯ ಅಧಿಕಾರಿ ಉದಯಕುಮಾರ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.