ಶನಿವಾರಸಂತೆ, ಸೆ. ೨೫: ಪಟ್ಟಣದ ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯ ಪ್ರಾಥಮಿಕ ಶಾಲೆ ೭ ನೇ ತರಗತಿ ವಿದ್ಯಾರ್ಥಿ ಎಚ್.ಡಿ.ರೋಹಿತ್ ಹಾಗೂ ಪ್ರೌಢಶಾಲೆಯ ೮ ನೇ ತರಗತಿ ವಿದ್ಯಾರ್ಥಿನಿ ಕೆ.ಕೆ.ಪ್ರಗತಿ ಈಚೆಗೆ ಮಡಿಕೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಸ್ಪರ್ಧಿಸಿದ್ದು ಪ್ರಥಮ ಸ್ಥಾನ ಗಳಿಸಿ, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.