ಕೂಡಿಗೆ, ಸೆ. ೨೫: ಶಾಲಾ ಶಿಕ್ಷಣ ಇಲಾಖೆ ಹಾಗೂ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ( ಡಿ.ಎಸ್.ಇ.ಆರ್.ಟಿ.) ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮಾನವಕುಲದ ಪ್ರಯೋಜನಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಎಂಬ ಕೇಂದ್ರ ವಿಷಯದಡಿ ೨೭ ರಂದು ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ( ಡಯಟ್ ) ಯಲ್ಲಿ ಬೆಳಿಗ್ಗೆ ೧೦.೩೦ ಕ್ಕೆ ಮೈಸೂರು ವಿಭಾಗಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ ಏರ್ಪಡಿಸಲಾಗಿದೆ.

ಸ್ಪರ್ಧೆಗೆ ಕೊಡಗು ಜಿಲ್ಲೆ ಸೇರಿದಂತೆ ರಾಮನಗರ, ಮಂಡ್ಯ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಿಂದ ಸ್ಪರ್ಧಿಗಳು ಭಾಗವಹಿಸಲಿದ್ದಾರೆ. ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ತಂಡಗಳು ಮಾತ್ರ ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆದಿವೆ ಎಂದು ಡಯಟ್ ಪ್ರಾಂಶುಪಾಲ ಎಂ.ಚAದ್ರಕಾAತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.