ಸುಂಟಿಕೊಪ್ಪ, ಸೆ. ೨೫: ೭ನೇ ಹೊಸಕೋಟೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಗಳು ಕಾರ್ಯೋನ್ಮುಖರಾಗಿ ಶಾಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಹಳೆಯ ವಿದ್ಯಾರ್ಥಿ ಸಂಘವನ್ನು ಸ್ಥಾಪಿಸಿದ್ದಾರೆ. ಶಾಲೆಯಲ್ಲಿ ಸಂಘ ರಚನೆ ಸಂಬAಧ ಕಾರ್ಯಕ್ರಮ ನಡೆಯಿತು.

ನೂತನ ಹಳೆಯ ವಿದ್ಯಾರ್ಥಿ ಸಂಘಕ್ಕೆ ಅಧ್ಯಕ್ಷರಾಗಿ ಅಬ್ದುಲ್ ರಜಾಕ್, ಉಪಾಧ್ಯಕ್ಷರಾಗಿ ಕೆ.ಎಚ್.ರಮೇಶ್, ಪ್ರಧಾನ ಕಾರ್ಯದರ್ಶಿಯಾಗಿ ಮಜೀದ್, ಸಹ ಕಾರ್ಯದರ್ಶಿಯಾಗಿ ರಾಮಚಂದ್ರ, ಖಜಾಂಚಿಯಾಗಿ ಸೌಮ್ಯ, ನಿರ್ದೇಶಕರುಗಳಾದ ಮುರುಗೇಶ್, ರಜಾಕ್, ಫಾರೂಕ್, ಪ್ರಶಾಂತ್ ಅವರುಗಳನ್ನು ನೇಮಕಗೊಳಿಸಲಾಯಿತು. ಈ ಸಭೆಯಲ್ಲಿ ೩೦ಕ್ಕೂ ಹೆಚ್ಚು ಹಳೆಯ ವಿದ್ಯಾರ್ಥಿಗಳು ಹಾಜರಿದ್ದರು. ಶಾಲೆಯ ಮುಖ್ಯ ಶಿಕ್ಷಕಿ, ಸಹ ಶಿಕ್ಷಕ, ಶಿಕ್ಷಕಿಯರು, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಮತ್ತು ಸದಸ್ಯರುಗಳು ಇದ್ದರು.