ಮಡಿಕೇರಿ, ಸೆ. ೨೬: “ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ೨೦೨೩” ರ ಜಾತ್ರಾ ಮಹೋತ್ಸವದ ಸಿದ್ಧತೆಗಳ ಬಗ್ಗೆ ಚರ್ಚಿಸಲು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ತಾ.೨೮ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಶ್ರೀ ಭಗಂಡೇಶ್ವರ ದೇವಾಲಯಕ್ಕೆ ಸೇರಿದ “ಮುಡಿ ಕಟ್ಟಡ”ದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ. ಎಂದು ದೇವಾಲಯದ ಕಾರ್ಯನಿರ್ವಾಹಣಾಧಿಕಾರಿ ಕೋರಿದ್ದಾರೆ.