ಮಡಿಕೇರಿ, ಸೆ. ೨೬: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನೆಯ ೨೦ನೇ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು.

ಕೃಷ್ಣ ಉಪಾಧ್ಯಯ ನೇತೃತ್ವದಲ್ಲಿ ತಾ. ೨೪ ರಂದು ಆರಂಭಗೊAಡ ಧಾರ್ಮಿಕ ಕೈಂಕರ್ಯದಲ್ಲಿ ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ದುರ್ಗಾ ಸಪ್ತಶತಿ ಪಾರಾಯಣ, ಮಹಾಪೂಜೆ, ದೀಪಾರಾಧನೆ ಹಾಗೂ ತೀರ್ಥಪ್ರಸಾದ ವಿನಿಯೋಗ ನಡೆದು ತಾ. ೨೫ ರಂದು ಚಂಡಿಕಾ ಹೋಮ, ಪೂರ್ಣಾಹುತಿ ಹಾಗೂ ಮಹಾ ಮಂಗಳಾರತಿ, ಗುರು ಗಣಪತಿ ಹೋಮ, ಪುಣ್ಯಾಹ, ಸಂಕಲ್ಪ, ಕಲಶಸ್ಥಾಪನೆ, ದೀಪಾರಾಧನೆ, ಅಷ್ಠಾವಧಾನ ಸೇವೆ ನಡೆಯಿತು. ತಾ. ೨೬ ರಂದು ಗುರುಗಣಪತಿ ಪೂಜೆ, ಪುಣ್ಯಾಹ, ಗಣಪತಿ ಹೋಮ, ಕಲಾಹೋಮ, ತತ್ವಹೋಮ, ತತ್ವಶಾಂತಿ ಹೋಮ, ದುರ್ಗಾ ಹೋಮ, ತತ್ವಕಲಶಾಭಿಷೇಕ, ಮಹಾಪೂಜೆ ನಡೆದು ಮಧ್ಯಾಹ್ನ ಅನ್ನದಾನ ನಡೆಯಿತು. ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ಪೂಜೆಯಲ್ಲಿ ಪಾಲ್ಗೊಂಡರು.