ಪೊನ್ನಂಪೇಟೆ, ಸೆ. ೨೬: ಪೊನ್ನಂಪೇಟೆ ಪಟ್ಟಣದಲ್ಲಿ ತಾ. ೨೭ರಂದು (ಇಂದು) ಗೌರಿ ಗಣೇಶ ವಿಸರ್ಜನೆ ನಡೆಯಲಿದೆ. ಪಟ್ಟಣದ ೭ ಕಡೆಗಳಲ್ಲಿ ಗೌರಿ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದ್ದು, ಮೆರವಣಿಗೆಯಲ್ಲಿ ಹೆಚ್ಚಿನ ಸಾರ್ವಜನಿಕರು ಪಾಲ್ಗೊಳ್ಳಲಿದ್ದಾರೆ. ಆದ್ದರಿಂದ ಗಣೇಶ ಮೂರ್ತಿಗಳ ಮೆರವಣಿಗೆ ಮತ್ತು ವಿಸರ್ಜನಾ ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳುವ ಹಾಗೂ ಕಾನೂನು - ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ, ಮುಂಜಾಗೃತ ಕ್ರಮವಾಗಿ ತಾ. ೨೭ರಂದು (ಇಂದು) ಬೆಳಿಗ್ಗೆ ೬ ಗಂಟೆಯಿAದ ತಾ. ೨೮ ರಂದು ಬೆಳಿಗ್ಗೆ ೬ ಗಂಟೆವರೆಗೆ ಪೊನ್ನಂಪೇಟೆ ಸುತ್ತಮುತ್ತಲಿನ ೧೦ ಕಿ.ಮೀ. ವ್ಯಾಪ್ತಿಯಲ್ಲಿರುವ ಎಲ್ಲಾ ರೀತಿಯ ಮದ್ಯದ ಮಳಿಗೆ ಹಾಗೂ ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್‌ಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.