ಕಡಂಗ, ಸೆ. ೨೬: ಕಡಂಗ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಣ್ ಅಭಿಯಾನ ಹಾಗೂ ಪೌಷ್ಟಿಕ ಆಹಾರ ಶಿಬಿರ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಆಯುಷ್ ಇಲಾಖೆಯ ವೈದ್ಯಾಧಿಕಾರಿ ಡಾ. ಶೈಲಜಾ ಮಾತನಾಡಿ, ಆಹಾರದಲ್ಲಿರುವ ಪೌಷ್ಟಿಕಾಂಶದ ಕುರಿತು ಸಂಕ್ಷಿಪ್ತವಾಗಿ ವಿವರಿಸಿದರು. ಶಾಲೆಯ ಮುಖ್ಯ ಶಿಕ್ಷಕಿ ಪಿ.ಎಂ. ಶಾಂತಕುಮಾರಿ ಪೌಷ್ಟಿಕ ಆಹಾರ ಸೇವನೆಯಿಂದ ಉಂಟಾಗುವ ಉಪಯೋಗಗಳ ಕುರಿತು ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ವಿವಿಧ ಬಗೆಯ ಪೌಷ್ಟಿಕ ಆಹಾರಗಳನ್ನು ತಯಾರಿಸಿ, ಹಣ್ಣು, ತರಕಾರಿ, ಸೊಪ್ಪುಗಳನ್ನು ವೇದಿಕೆಯಲ್ಲಿ ಪ್ರದರ್ಶಿಸಿ ಗಮನ ಸೆಳೆದರು. ಇವುಗಳ ಉಪಯೋಗದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.