ಮಡಿಕೇರಿ, ಸೆ. ೨೬: ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿ ಕೊಡಗು ಜಿಲ್ಲಾ ಹಾಗೂ ತಾಲೂಕು ಘಟಕದ ವತಿಯಿಂದ ತಾ. ೨೮ರಂದು (ನಾಳೆ) ಕುಶಾಲನಗರ ಎಪಿಸಿಎಂಎಸ್ ಸಭಾಂಗಣದಲ್ಲಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿಯ ಜಿಲ್ಲಾಧ್ಯಕ್ಷ ಎಂ.ಎಸ್. ಮಹೇಂದ್ರ ತಿಳಿಸಿದ್ದಾರೆ.

ಪತ್ರಿಕಾ ಭವನದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಬೆಳಿಗ್ಗೆ ೧೦ ಗಂಟೆಗೆ ಕಾರ್ಯಕ್ರಮವನ್ನು ಮಡಿಕೇರಿ ಶಾಸಕ ಡಾ. ಮಂಥರ್‌ಗೌಡ ಹಾಗೂ ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಉದ್ಘಾಟಿಸಲಿದ್ದು, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಾಜಿ ಶಾಸಕರುಗಳಾದ ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ ಪುಷ್ಪಾರ್ಚನೆ ನೆರವೇರಿಸಲಿದ್ದಾರೆ. ಚಾಮರಾಜನಗರ ನಳಂದ ಬೌದ್ಧ ವಿಶ್ವವಿದ್ಯಾನಿಲಯದ ಬಂತೇಜಿ ಬೋಧಿದತ್ತ ತೇರಾ ಅವರು ದಿವ್ಯಸಾನಿಧ್ಯ ವಹಿಸಲಿದ್ದು, ಬೆಂಗಳೂರಿನ ಅಂಬೇಡ್ಕರ್ ವಿಚಾರವಾದಿ ಬಿ. ಗೋಪಾಲ್ ಪ್ರಧಾನ ಭಾಷಣ ಮಾಡಲಿದ್ದಾರೆ. ಎಸ್ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ ಡಿ. ಶಿವಶಂಕರ್ ಪಾಲ್ಗೊಳ್ಳಲಿದ್ದಾರೆ. ಅತಿಥಿಗಳಾಗಿ ಜಿ.ಪಂ. ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಮಡಿಕೇರಿ ನಗರಸಭೆ ಮಾಜಿ ಅಧ್ಯಕ್ಷ ನಂದಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸುಂದರ್‌ರಾಜ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಮಹೇಂದ್ರ ಮಾಹಿತಿಯಿತ್ತರು.

ಗೋಷ್ಟಿಯಲ್ಲಿ ಸಮಿತಿ ಮಡಿಕೇರಿ ತಾಲೂಕು ಅಧ್ಯಕ್ಷ ಎಂ.ಎಲ್. ಶಂಭು, ಕುಶಾಲನಗರ ತಾಲೂಕು ಅಧ್ಯಕ್ಷ ಆರ್. ವಿಜಯಾನಂದ ಉಪಸ್ಥಿತರಿದ್ದರು.