ಪೊನ್ನಂಪೇಟೆ, ಸೆ. ೨೬ ಪೊನ್ನಂಪೇಟೆ ತಾಲೂಕಿನ ಬಲ್ಯಮಂಡೂರು ಗ್ರಾಮದ ಶ್ರೀ ವಿಘ್ನ ವಿಘ್ನೇಶ್ವರ ಮಂಡಳಿ ವತಿಯಿಂದ ಪ್ರಥಮ ವರ್ಷದ ಗೌರಿ ಗಣೇಶೋತ್ಸವ ಆಚರಿಸಲಾಯಿತು.

ಇಲ್ಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಿಂದ ಸಾಂಪ್ರದಾಯಿಕ ವಾಲಗ ಸಮೇತ ಗೌರಿ ಗಣೇಶ ಮೂರ್ತಿಯ ಮೆರವಣಿಗೆ ಹೊರಟು ಕೊಡ್ಚಿವರೆಗೆ ತಲುಪಿ, ನಂತರ ಬಲ್ಯಮಂಡೂರು ಗ್ರಾಮದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಲಾಯಿತು. ರಸ್ತೆಯುದ್ದಕ್ಕೂ ಸಾರ್ವಜನಿಕರು ಗೌರಿ ಗಣೇಶನಿಗೆ ಹಣ್ಣು-ಕಾಯಿ ಪೂಜೆ ಸಲ್ಲಿಸಿ, ಈಡುಗಾಯಿ ಹೊಡೆದು ಪುನೀತರಾದರು. ಮೆರವಣಿಗೆ ನಂತರ ಬಲ್ಯಮಂಡೂರು ಬಸವೇಶ್ವರ ದೇವಸ್ಥಾನದ ಕೆರೆಯಲ್ಲಿ ಗೌರಿ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲಾಯಿತು. ನೆರೆದಿದ್ದ ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿತರಿಸಲಾಯಿತು.