ಮಡಿಕೇರಿ, ಸೆ. ೨೬: ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ ೨೦೨೩-೨೪ ನೇ ಸಾಲಿನಲ್ಲಿ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ಕಾನೂನು ಪದವೀಧರರಿಗೆ ನುರಿತ ವಕೀಲರಿಂದ ತರಬೇತಿ ನೀಡಲು ಮಾಸಿಕ ರೂ.೫ ಸಾವಿರ ರೂ ತರಬೇತಿ ಭತ್ಯೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ದಿನಾಂಕ: ೦೭-೧೦-೨೦೨೩ ರೊಳಗಾಗಿ ಸಲ್ಲಿಸುವುದು. ಹೆಚ್ಚಿನ ಮಾಹಿತಿ ಪಡೆಯ ಬಯಸುವ ಅಭ್ಯರ್ಥಿಗಳು ಜಿಲ್ಲಾ ಅಲ್ಪಸಂಖ್ಯಾತರ ಇಲಾಖಾ ಕಚೇರಿಯನ್ನು ಸಂಪರ್ಕಿಸಲು ಸೂಚಿಸಿದೆ.

ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್‌ಸೈಟ್ ತಿತಿತಿ.ಜom.ಞಚಿಡಿಟಿಚಿಣಚಿಞಚಿ.gov.iಟಿ ಅನ್ನು ಸಂಪರ್ಕಿಸಬಹುದು. ಕಚೇರಿ ದೂರವಾಣಿ ಸಂಖ್ಯೆ: ೦೮೨೭೨-೨೨೫೫೨೮/೨೨೦೨೧೪ ಹಾಗೂ ಇಲಾಖಾ ವೆಬ್‌ಸೈಟ್ ತಿತಿತಿ.ಜom.ಞಚಿಡಿಟಿಚಿಣಚಿಞಚಿ.gov.iಟಿ ನಿಂದ ಅಲ್ಪಸಂಖ್ಯಾತರ ಎಲ್ಲಾ ಅರ್ಹ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಮತ್ತು ಇತರೆ ಸೌಲಭ್ಯಗಳ ಮಾಹಿತಿಯನ್ನು ಪಡೆದು ಸದುಪಯೋಗಪಡಿಸಿಕೊಳ್ಳುವಂತೆ ಅಲ್ಪಸಂಖ್ಯಾ ತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ.ದಿವಾಕರ ಅವರು ತಿಳಿಸಿದ್ದಾರೆ.