ಸಿದ್ದಾಪುರ, ಸೆ. ೨೭: ಶಾಂತಿ ಸಹಬಾಳ್ವೆ ಸಹೋದರತ್ವ ಸಾರುವ ಮಹಮ್ಮದ್ ಪೈಗಂಬರ್ ಅವರ ಸಂದೇಶವನ್ನು ಹಂಚಿಕೊಳ್ಳಲು ಸುನ್ನಿ ಯುವಜನ ಸಂಘಟನೆ ವತಿಯಿಂದ ಜಿಲ್ಲೆಯಾದ್ಯಂತ ಸಂದೇಶ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಕ್ಕಿಂಜೆಯ ಅಬ್ದುಲ್ ರಶೀದ್ ಝೈನಿ ಹೇಳಿದರು.

ಸುನ್ನಿ ಯುವಜನ ಸಂಘದ ವತಿಯಿಂದ ಸಿದ್ದಾಪುರದಲ್ಲಿ ನಡೆದ ಈದ್ ಮಿಲಾದ್ ಸಂದೇಶ ಸಾರುವ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಅವರು ಕರ್ನಾಟಕ ಮುಸ್ಲಿಂ ಜಮಾಅತ್ ಹಾಗೂ ಸುನ್ನಿ ಯುವಜನ ಸಂಘಟನೆ ಪ್ರವಾದಿಯವರ ಸಂದೇಶ ಸಾರುವ ಮೂಲಕ ಯುವ ಸಮೂಹ ದುಶ್ಚಟಗಳಿಂದ ದೂರವಿದ್ದು ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕೆAದು ಜಾಗೃತಿ ಅಭಿಯಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು ಎಸ್.ಎಸ್.ಎಫ್ ಸಂಘಟನೆಯ ಸಂಚಾಲಕ ಕೆ.ಯಂ. ಬಾವ, ಜಿಲ್ಲಾಧ್ಯಕ್ಷ ಜುಬೈರ್ ಸಾಹದಿ, ಪ್ರಧಾನ ಕಾರ್ಯದರ್ಶಿ ಅಬ್ದುಲ್ಲಾ, ಹಂಸ, ಅಶ್ರಫ್ ಸೇರಿದಂತೆ ಸಂಘಟನೆ ಕಾರ್ಯಕರ್ತರು ಹಾಗೂ ಮುಖಂಡರುಗಳು ಹಾಜರಿದ್ದರು. ಸಂದೇಶ ಜಾಥಾದಲ್ಲಿ ಜಿಲ್ಲೆಯ ನಾನಾ ಭಾಗಗಳಿಂದ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದರು. ವಿದ್ಯಾರ್ಥಿಗಳ ದಫ್ ಪ್ರದರ್ಶನ ಗಮನ ಸೆಳೆಯಿತು.