ಸೋಮವಾರಪೇಟೆ, ಸೆ. ೨೭: ಇಲ್ಲಿನ ಕೊಡವ ಸಮಾಜದ ವತಿಯಿಂದ ಕೈಲ್‌ಮುಹೂರ್ತ ಹಬ್ಬದ ಸಂತೋಷಕೂಟ ಸಮಾರಂಭ ಅ. ೧ರಂದು ಪೂರ್ವಾಹ್ನ ೧೦.೪೫ಕ್ಕೆ ಸಮಾಜದ ಸಭಾಂಗಣದಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ಮಾಳೇಟಿರ ಅಭಿಮನ್ಯುಕುಮಾರ್ ತಿಳಿಸಿದ್ದಾರೆ.

ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಭಾಗವಹಿಸಲಿದ್ದಾರೆ. ಇದೇ ಸಂದರ್ಭ ಮಡಿಕೇರಿ ಆಕಾಶವಾಣಿಯ ನಿವೃತ್ತ ಉದ್ಘೋಷಕರಾದ ಕೂಪದಿರ ಶಾರದಾ ನಂಜಪ್ಪ ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.

ಸಮಾರಂಭದ ಅಂಗವಾಗಿ ವಿವಿಧ ಕ್ರೀಡಾ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.