ಮಡಿಕೇರಿ, ಸೆ. ೨೭ : ಗೋಣಿಕೊಪ್ಪಲು ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸುವ ಸಭೆಯು ತಾ. ೩೦ ರಂದು ಬೆಳಿಗ್ಗೆ ೧೦.೩೦ ಗಂಟೆಯಿAದ ೧೧.೩೦ ಗಂಟೆವರೆಗೆ ಗೋಣಿಕೊಪ್ಪಲು ಉಪ ವಿಭಾಗ ಕಚೇರಿ ಆವರಣದಲ್ಲಿ ಅಧೀಕ್ಷಕ ಎಂಜಿನಿಯರ್, ಸೆಸ್ಕ್, ಕೊಡಗು ಮತ್ತು ಚಾಮರಾಜನಗರ ವೃತ್ತರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಹಾಗೆಯೇ ವೀರಾಜಪೇಟೆ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸುವ ಸಭೆಯು ತಾ. ೩೦ ರಂದು ಮಧ್ಯಾಹ್ನ ೩.೩೦ ಗಂಟೆಯಿAದ ೦೪.೩೦ ಗಂಟೆವರೆಗೆ ವೀರಾಜಪೇಟೆ ಉಪ ವಿಭಾಗ ಕಚೇರಿ ಆವರಣದಲ್ಲಿ ಅಧೀಕ್ಷಕ ಎಂಜಿನಿಯರ್, ಸೆಸ್ಕ್, ಕೊಡಗು ಮತ್ತು ಚಾಮರಾಜನಗರ ವೃತ್ತರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಗೋಣಿಕೊಪ್ಪಲು ಮತ್ತು ವೀರಾಜಪೇಟೆ ವ್ಯಾಪ್ತಿಯ ಸಾರ್ವಜನಿಕರು, ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬAಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಸಭೆಗೆ ಹಾಜರಾಗುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.