ಕೂಡಿಗೆ, ಸೆ. ೨೭ : ಶಾಲಾ ಶಿಕ್ಷಣ ಇಲಾಖೆ ಹಾಗೂ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ಮಾನವಕುಲದ ಪ್ರಯೋಜನಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನ’ ಎಂಬ ಕೇಂದ್ರ ವಿಷಯದಡಿ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್)ಯಲ್ಲಿ ಏರ್ಪಡಿಸಿದ್ದ ಮೈಸೂರು ವಿಭಾಗಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ನಾಟಕ ಪ್ರದರ್ಶಿಸಿ ಗಮನ ಸೆಳೆದರು.
ವಿಜ್ಞಾನ ನಾಟಕ ಸ್ಪರ್ಧೆ ಉದ್ಘಾಟಿಸಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಡಯಟ್ನ ಪ್ರಾಂಶುಪಾಲ ಎಂ.ಚAದ್ರಕಾAತ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ವೈಜ್ಞಾನಿಕ ಮನೋಭಾವ ಬೆಳೆಸುವ ಉದ್ದೇಶದಿಂದ ಇಂತಹ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
ವಿಜ್ಞಾನ ಮನುಷ್ಯನ ಬದುಕಿನ ಅವಿಭಾಜ್ಯ ಅಂಗವಾಗಿದೆ. ಲೋಕ ಶಿಕ್ಷ ಣದ ಸಂದೇಶವನ್ನು ಸಮಾಜಕ್ಕೆ ರವಾನಿಸುವ ಪ್ರಭಾವಿ ಮಾಧ್ಯಮವಾಗಿ ನಾಟಕ ಕಲೆ ಮಹತ್ವ ಪಡೆದುಕೊಂಡಿದೆ ಎಂದರು. ಕಲೆ ಮತ್ತು ವಿಜ್ಞಾನದ ನಡುವೆ ನಿಕಟವಾದ ಸಂಬAಧವಿದ್ದು, ವಿದ್ಯಾರ್ಥಿಗಳಿಗೆ ಆಯೋಜಿಸಿರುವ ವಿಜ್ಞಾನ ನಾಟಕ ಸ್ಪರ್ಧೆ ವಿದ್ಯಾರ್ಥಿಗಳಿಗೆ ಜ್ಞಾನದ ಪ್ರತಿಭೆಯನ್ನು ಹೆಚ್ಚಿಸುವಲ್ಲಿ ಪರಿಣಾಮಕಾರಿ ಪಾತ್ರ ವಹಿಸುತ್ತದೆ ಎಂದು ಹೇಳಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ನಾಟಕ ಸ್ಪರ್ಧೆಯ ನೊಡೇಲ್ ಅಧಿಕಾರಿ ಕೆ.ಜಿ.ನೀಲಕಂಠಪ್ಪ ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ, ಜ್ಞಾನ ಹೆಚ್ಚಿಸಲು ಸರಕಾರ ವಿಜ್ಞಾನ ನಾಟಕ ಸ್ಪರ್ಧೆ ಏರ್ಪಡಿಸಲಾಗಿದೆ ಎಂದರು.
ಕೂಡುಮAಗಳೂರು ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಇಂತಹ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಲು ಸಹಕಾರಿ ಎಂದರು. ಡಯಟ್ ಸಂಸ್ಥೆಯ ಪೂರ್ವ ಸೇವಾ ತರಬೇತಿ ವಿಭಾಗದ ಮುಖ್ಯಸ್ಥ ಎಂ.ಕೃಷ್ಣಪ್ಪ, ಸಂಸ್ಥೆಯ ಉಪನ್ಯಾಸಕರಾದ, ವಿ.ವಿಜಯ್, ಕೆ.ಎಸ್.ನಳಿನಾಕ್ಷಿ, ಲತಾ, ಗಾಯಿತ್ರಿ, ಗೀತಾ ಇದ್ದರು.
ನಾಟಕ ಪ್ರದರ್ಶನ: ನಾಟಕ ಸ್ಪರ್ಧೆಯಲ್ಲಿ "ಮಾನವಕುಲದ ಪ್ರಯೋಜನಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನ" ಎಂಬ ಕೇಂದ್ರ ವಿಷಯದಡಿ ಅದ್ಭುತ ಆಹಾರವಾಗಿ ಸಿರಿಧಾನ್ಯಗಳು, ಆಹಾರ ಭದ್ರತೆ, ನಿತ್ಯ ಜೀವನದಲ್ಲಿ ಆಧುನಿಕ ತಂತ್ರಜ್ಞಾನ, ಆರೋಗ್ಯ ರಕ್ಷಣೆಯಲ್ಲಿ ಪ್ರಸ್ತುತ ಪ್ರಗತಿಗಳು ಸಮಾಜದಲ್ಲಿನ ಮೂಢನಂಬಿಕೆಗಳು ಎಂಬ ವಿಷಯಗಳ ಕುರಿತು ವಿದ್ಯಾರ್ಥಿಗಳು ನಾಟಕ ಪ್ರದರ್ಶಿಸಿದರು.
ಸ್ಪರ್ಧೆಯಲ್ಲಿ ಕೊಡಗು ಜಿಲ್ಲೆ ಸೇರಿದಂತೆ ರಾಮನಗರ, ಮಂಡ್ಯ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಿಂದ ತಲಾ ಒಂದೊAದು ತಂಡದ ಸ್ಪರ್ಧಿಗಳು ಭಾಗವಹಿಸಿದ್ದರು.