ಮುಳ್ಳೂರು, ಸೆ. ೨೭: ಗೌರಿ-ಗಣೇಶ ಹಬ್ಬದ ಪ್ರಯುಕ್ತ ವಿವಿಧ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಿದ್ದ ಗೌರಿ-ಗಣೇಶ ಮೂರ್ತಿ ವಿಸರ್ಜಿಸಲಾಯಿತು.
ಸಮೀಪದ ಕಣಿವೆ ಬಸವನಹಳ್ಳಿ ಗ್ರಾಮದಲ್ಲಿ ಗೌರಿ ಗಣೇಶ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಿದ್ದ ಗೌರಿ ಗಣೇಶ ಮೂರ್ತಿಯ ವಿಸರ್ಜನೆ ಕಾರ್ಯಕ್ರಮದ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು. ನಂತರ ಗೌರಿ ಗಣೇಶ ಮೂರ್ತಿಯನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಕೊಂಡೊಯ್ದು ಗ್ರಾಮದ ಕೆರೆಯಲ್ಲಿ ವಿಸರ್ಜಿಸಲಾಯಿತು.
ಮುಳ್ಳೂರು ಗ್ರಾಮದ ವಿನಾಯಕ ಸೇವಾ ಸಮಿತಿಯಿಂದ ಪ್ರತಿಷ್ಠಾಪಿಸಿದ ಗೌರಿ-ಗಣೇಶ ಮೂರ್ತಿಯ ವಿಸರ್ಜನೆ ಕಾರ್ಯಕ್ರಮದ ಅಂಗವಾಗಿ ವಿಶೇಷ ಪೂಜೆ, ಹೋಮ, ಹವನ ಕೈಂಕರ್ಯ ನಡೆಯಿತು. ವಿಸರ್ಜನಾ ಕಾರ್ಯಕ್ರಮದ ಪ್ರಯುಕ್ತ ಮಹಿಳೆಯರಿಗೆ ರಂಗೋಲಿ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು. ಗ್ರಾಮದ ಮುಖ್ಯ ಬೀದಿಗಳಲ್ಲಿ ಗೌರಿ ಗಣೇಶ ಮೂರ್ತಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ದ ಬಳಿಕ ಮುಳ್ಳೂರು ಗ್ರಾಮದ ಇಂಟಿನಾಯಕನ ಕೆರೆಯಲ್ಲಿ ವಿಸರ್ಜಿಸಲಾಯಿತು. ಸಮೀಪದ ಮಾಲಂಬಿ ಗ್ರಾಮದ ವಿನಾಯಕ ಸೇವಾ ಸಮಿತಿ ವತಿಯಿಂದ ಗೌರಿ-ಗಣೇಶ ಹಬ್ಬದ ಪ್ರಯುಕ್ತ ಪ್ರತಿಷ್ಠಾಪಿಸಿದ ಗೌರಿ-ಗಣೇಶ ಮೂರ್ತಿ ವಿಸರ್ಜನೆ ಕಾರ್ಯಕ್ರಮದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮ ನಡೆಸಲಾಯಿತು. ನಂತರ ಗ್ರಾಮದ ಬೀದಿ ಬೀದಿಗಳಲ್ಲಿ ಗೌರಿ-ಗಣೇಶ ಉತ್ಸವ ಮೂರ್ತಿಯ ಮೆರವಣಿಗೆ ನಡೆಸಿ ವಿಸರ್ಜಿಸಲಾಯಿತು.