ಚೆಯ್ಯಂಡಾಣೆ, ಸೆ. ೨೭: ಸಮೀಪದ ಎಡಪಾಲ ಗ್ರಾಮಕ್ಕೆ ವೀರಾಜಪೇಟೆ ಕ್ಷೇತ್ರದ ಶಾಸಕ ಭೇಟಿ ನೀಡಿ ಸ್ಥಳೀಯ ಮದರಸ ಸಭಾಂಗಣ ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪೊನ್ನಣ್ಣ, ಕಾಂಗ್ರೆಸ್ ಸರ್ಕಾರ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದಿದೆ ಎಂದರು.

ಇದೇ ಸಂದರ್ಭ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಹನೀಫ್ ಚೋಕಂಡಳ್ಳಿ ಹಾಗೂ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್ ಇವರುಗಳನ್ನು ಸನ್ಮಾನಿಸಲಾಯಿತು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೋಡಿರ ವಿನೋದ್ ನಾಣಯ್ಯ, ಗ್ರಾ.ಪಂ. ಸದಸ್ಯ ಮಮ್ಮದ್, ಸುಬೈರ್, ಪೊಯಾಪಳ್ಳಿ ಮುಸ್ಲಿಂ ಜಮಾಅತ್ ಅಧ್ಯಕ್ಷ ಕೆ.ಯು. ಶಾಫಿ, ಉಮ್ಮರ್ ಸಿಆರ್‌ಪಿ, ಉಮ್ಮರ್ ಮಾಸ್ಟರ್, ವೈ.ಎಂ. ಮೊಹಮ್ಮದ್, ಬಷೀರ್, ಮುದರಿಸ್ ನಿಝರ್ ಫೈಝಿ ಮತ್ತಿತರರು ಉಪಸ್ಥಿತರಿದ್ದರು.

ಇದೇ ವೇಳೆ ಮಳೆಗಾಲದಲ್ಲಿ ಹೊಳೆ ನೀರಿನಿಂದ ಜಲಾವೃತ್ತವಾಗುವ ಸರಕಾರಿ ಪ್ರಾಥಮಿಕ ಶಾಲೆಯ ಮೈದಾನಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಶಾಲಾ ಮುಖ್ಯ ಶಿಕ್ಷಕಿ ಶ್ಯಾಮಲ ಹಾಗೂ ಗ್ರಾಮಸ್ಥರಿಂದ ಮಾಹಿತಿ ಪಡೆದುಕೊಂಡರು. ಕೂಡಲೇ ಇದರ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.