ವೀರಾಜಪೇಟೆ: ೨೦೨೩-೨೪ನೇ ಸಾಲಿನ ಕೊಡಗು ಜಿಲ್ಲಾ ಪಂಚಾಯಿತಿ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ವೀರಾಜಪೇಟೆ ತಾಲೂಕು ಹಾಗೂ ಬಾಳೆಲೆ ಪ್ರೌಢ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸರ್ಕಾರಿ ಪ್ರೌಢಶಾಲೆ, ಬಿಳುಗುಂದದ ವಿದ್ಯಾರ್ಥಿನಿಯರು ಥ್ರೋಬಾಲ್ ಆಟದಲ್ಲಿ ತಾಲೂಕು ಮಟ್ಟದಲ್ಲಿ ಗೆಲುವು ಸಾಧಿಸಿ, ಜಿಲ್ಲಾ ಮಟ್ಟವನ್ನು ಪ್ರತಿನಿಧಿಸಲಿದ್ದಾರೆ ಎಂದು ಶಾಲಾ ಮುಖ್ಯ ಶಿಕ್ಷಕಿ ಅರುಣ್ ಆನ್ಸಿ ಡಿಸೋಜ ತಿಳಿಸಿದ್ದಾರೆ.

ಅಲ್ಲದೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕು. ಫಾತಿಮತ್ ಶಹಲ ಇಂಗ್ಲೀಷ್ ಭಾಷಣದಲ್ಲಿ ಪ್ರಥಮ, ಕು. ಫಾತಿಮತ್ ಜೋರ ಕವನ ವಾಚನದಲ್ಲಿ ಪ್ರಥಮ ಹಾಗೂ ಕನ್ನಡ ಚರ್ಚಾ ಸ್ಪರ್ಧೆಯಲ್ಲಿ ಕು. ಜೈನಭ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ನಾಪೋಕ್ಲು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಸ್ಥಳೀಯ ಸಂಸ್ಥೆ ಸಂಪಾಜೆ ವತಿಯಿಂದ ಏರ್ಪಡಿಸಲಾಗಿದ್ದ ದೇಶಭಕ್ತಿ ಗೀತೆ ಗಾಯನ ಸ್ಪರ್ಧೆಯಲ್ಲಿ ಗೈಡ್ಸ್ ವಿಭಾಗದಲ್ಲಿ ಬೇತು ಗ್ರಾಮದ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಶನ್‌ನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಗಳಿಸಿದ್ದಾರೆ. ವಿದ್ಯಾರ್ಥಿಗಳಾದ ಯುಕ್ತ ಪೊನ್ನಮ್ಮ, ಆಫಿಯ, ಆಶ್ರಿಯ, ಸಜಾ ಫಾತಿಮ, ಶರಣ್ಯ, ದುಂದುಭಿ, ಅಹನಿ ಶಾರದಾ, ಶಾಸ್ತಾ ಪೊನ್ನಮ್ಮ ಗೈಡ್ ಕ್ಯಾಪ್ಟನ್ ಕಾಳೆಯಂಡ ಅಮಿತ ನೇತೃತ್ವದಲ್ಲಿ ಪಾಲ್ಗೊಂಡಿದ್ದರು. ಮುಖ್ಯ ಶಿಕ್ಷಕ ತಮ್ಮಯ್ಯ, ಸ್ಥಾಪಕ ಅಧ್ಯಕ್ಷ ಕುಟ್ಟಂಜೆಟ್ಟೀರ ಮಾದಪ್ಪ ಇದ್ದರು. ಶನಿವಾರಸಂತೆ: ಜಿಲ್ಲಾ ಪಂಚಾಯಿತಿ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಸಹ ಭಾಗಿತ್ವದಲ್ಲಿ ಸಮೀಪದ ಕೊಡ್ಲಿಪೇಟೆ ಪದವಿ ಪೂರ್ವ ಕಾಲೇಜು ಕ್ರೀಡಾ ಮೈದಾನದಲ್ಲಿ ಈಚೆಗೆ ನಡೆದ ತಾಲೂಕು ಮಟ್ಟದ ಬಾಲಕರ ವಿಭಾಗದ ಹ್ಯಾಂಡ್ ಬಾಲ್ ಕ್ರೀಡಾಕೂಟದಲ್ಲಿ ಕುಶಾಲನಗರ ವಿವೇಕಾನಂದ ಕಾಲೇಜು ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟದ ಕ್ರೀಡೆಗೆ ಆಯ್ಕೆಯಾಗಿದೆ. ಕೊಡ್ಲಿಪೇಟೆ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ ಗಳಿಸಿದೆ.

ಕೊಡ್ಲಿಪೇಟೆ ವಿದ್ಯಾಸಂಸ್ಥೆ ಉಪಾಧ್ಯಕ್ಷ ಸಿ.ಸಿ.ಶಂಭುಲಿAಗಪ್ಪ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಪವಾರ್, ಪದವಿ ಕಾಲೇಜು ಪ್ರಾಂಶುಪಾಲ ನಿರಂಜನ್, ಶನಿವಾರಸಂತೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಸ್.ಜೆ. ಅಶೋಕ್, ಆಲೂರು ಸಿದ್ದಾಪುರ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಚಂದ್ರಶೇಖರ್ ಹಾಜರಿದ್ದರು.

ಕ್ರೀಡಾಕೂಟದಲ್ಲಿ ಸೋಮವಾರಪೇಟೆ ಹಾಗೂ ಕುಶಾಲನಗರ ವ್ಯಾಪ್ತಿಯ ಪದವಿ ಪೂರ್ವ ಕಾಲೇಜು ಬಾಲಕರ ತಂಡಗಳು ಭಾಗವಹಿಸಿದ್ದವು. ಇದೇ ಸಂದರ್ಭ ಉದ್ದ, ಎತ್ತರ ಹಾಗೂ ತ್ರಿವಿಧ ಜಿಗಿತ ಸ್ಪರ್ಧೆಗಳು ನಡೆದವು. ತೀರ್ಪುಗಾರರಾಗಿ ದೈಹಿಕ ಶಿಕ್ಷಣ ಶಿಕ್ಷಕರಾದ ಕೆ.ಆರ್. ರಂಗಸ್ವಾಮಿ, ಸುನೀಲ್, ಆದರ್ಶ ಕಾರ್ಯನಿರ್ವಹಿಸಿದರು. ವೀರಾಜಪೇಟೆ: ವೀರಾಜಪೇಟೆ ಕಾವೇರಿ ಪದವಿ ಕಾಲೇಜು ವಿದ್ಯಾರ್ಥಿ ಕ್ಷೇಮ ಪಾಲನ ಸಂಘ ೨೦೨೩-೨೪ನೇ ಸಾಲಿಗೆ ವಿದ್ಯಾರ್ಥಿ ಪದಾಧಿಕಾರಿಗಳನ್ನು ಚುನಾವಣೆಯ ಮೂಲಕ ಆಯ್ಕೆ ಮಾಡಲಾಯಿತು. ವಿದ್ಯಾರ್ಥಿ ಕ್ಷೇಮ ಪಾಲನ ಸಂಘದ ಉಪಾಧ್ಯಕ್ಷರಾಗಿ ಅಂತಿಮ ಬಿ.ಎ ಪದವಿಯ ದೀಕ್ಷಿತ್ ಪೊನ್ನಮ್ಮ ಸಿ.ಎಂ. ಆಯ್ಕೆಯಾದರು.

ಪ್ರಧಾನ ಕಾರ್ಯದರ್ಶಿಯಾಗಿ ಅಂತಿಮ ಬಿ.ಎ. ವಿದ್ಯಾರ್ಥಿ ದೀಕ್ಷಾ, ಕ್ರೀಡಾ ಕಾರ್ಯದರ್ಶಿಯಾಗಿ ದಾನಿಶ್ ಪೊನ್ನಣ್ಣ, ಜಂಟಿ ಕಾರ್ಯದರ್ಶಿಗಳಾಗಿ ದ್ವಿತೀಯ ಬಿ.ಕಾಂ.ನ ಮುತ್ತಣ್ಣ ಹಾಗೂ ಸೋನಿ ಎಂ.ಪಿ. ಆಯ್ಕೆಯಾದರು. ಚುನಾವಣಾ ಪ್ರಕ್ರಿಯೆಯು ಕಾಲೇಜಿನ ಪ್ರಾಂಶುಪಾಲರಾದ ಡಾ ಆನಂದ. ಕೆ. ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನ ಸಂಘದ ಸಂಚಾಲಕಿ ಅಂಬಿಕಾ, ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಚಾಲಕಿ ವೀಣಾ ಹಾಗೂ ಕಾಲೇಜಿನ ಉಪನ್ಯಾಸಕ ವೃಂದದವರು ಹಾಜರಿದ್ದರು. ಈ ಚುನಾವಣಾ ಪ್ರಕ್ರಿಯೆಯನ್ನು ಉಪನ್ಯಾಸಕರಾದ ಬೆನೆಡಿಕ್ಟ್ ಸಲ್ಡಾನ, ರಾಘವೇಂದ್ರ, ನಿರ್ಮಿತ ಇವರು ನಡೆಸಿಕೊಟ್ಟರು.ನಾಪೋಕ್ಲು: ಮಕ್ಕಳ ಕ್ರೀಡಾ ಆಸಕ್ತಿಯನ್ನು ಅರಿತು ಅದಕ್ಕೆ ತಕ್ಕಂತೆ ಸೂಕ್ತ ಮಾರ್ಗದರ್ಶನ ನೀಡಿದಲ್ಲಿ ಉತ್ತಮ ಕ್ರೀಡಾಪಟು ಆಗಲು ಸಾಧ್ಯ ಎಂದು ಮಡಿಕೇರಿ ತಾಲೂಕು ತಹಶೀಲ್ದಾರ್ ಪಿ.ಸಿ. ಪ್ರವೀಣ್‌ಕುಮಾರ್ ಅಭಿಪ್ರಾಯಪಟ್ಟರು. ಅವರು ಇಲ್ಲಿನ ಕರ್ನಾಟಕ ಪಬ್ಲಿಕ್ ಪ್ರಾಥಮಿಕ ಶಾಲಾ ಆಟದ ಮೈದಾನದಲ್ಲಿ ಕೊಡಗು ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಪ್ಪೆಂಡಡಿ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ಆಯೋಜಿಸಿದ ಮಡಿಕೇರಿ ತಾಲೂಕು ಮಟ್ಟದ ಅಂತರ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ ೨೦೨೩-೨೪ದ ಉದ್ಘಾಟನಾ ಸಮಾರಂಭದಲ್ಲಿ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಮಡಿಕೇರಿ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ದೊಡ್ಡೇಗೌಡ ಬಿ.ಸಿ. ಮಾತನಾಡಿ ಕ್ರೀಡೆ ದೈಹಿಕ ಮಾನಸಿಕ ಸಮತೋಲನಗವನ್ನು ವಿಕಸನಕ್ಕೆ ಸಹಕಾರಿಯಾಗಿದೆ ಎಂದ ಅವರು ತಾಲೂಕಿನ ದೈಹಿಕ ಶಿಕ್ಷಕರು ಉತ್ತಮ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ತಮ್ಮ ಪ್ರಸಂಸ್ಥೆಯನ್ನು ವ್ಯಕ್ತಪಡಿಸಿದರು. ಗ್ರಾಮ ಪಂಚಾಯಿತಿ ಸದಸ್ಯ ಕುಲ್ಲೇಟಿರ ಅರುಣ ಬೇಬಾ ಮಾತನಾಡಿ ಈ ಆಟದ ಮೈದಾನ ಅಂತರಾಷ್ಟ್ರೀಯ ಕ್ರೀಡಾಪಟುಗಳನ್ನು ರಾಷ್ಟçಕ್ಕೆ ನೀಡಿದೆ ಕ್ರೀಡೆಯಲ್ಲಿ ಸೋಲು ಗೆಲುವು ನಾಣ್ಯದ ಎರಡು ಮುಖಗಳಿದ್ದಂತೆ ಎಂದುರು. ಕೆ.ಪಿ.ಎಸ್.ಎಸ್., ಡಿ.ಎಂ.ಸಿ. ಉಪಾಧ್ಯಕ್ಷ ಹ್ಯಾರಿಸ್ ಕೆ.ಎ. ಕ್ರೀಡಾ ಜ್ಯೋತಿ ಬೆಳಗಿಸಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕುಲ್ಲೇಟಿರ ಹೇಮಾವತಿ ಅರುಣ ಪಥ ಸಂಚಲನದ ಗೌರವ ವಂದನೆ ಸ್ವೀಕರಿಸಿದರು. ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘ. ಮಡಿಕೇರಿ ತಾಲೂಕು ಶಾಖೆಯ ಅಧ್ಯಕ್ಷ ಪ್ರಸಾದ್ ಕೆದಂಬಾಡಿ ಕ್ರೀಡಾಪಟುಗಳಿಗೆ ಪ್ರಮಾಣ ವಚನ ಬೋಧಿಸಿದರು. ದೈಹಿಕ ಶಿಕ್ಷಣ ಶಿಕ್ಷಕರ ಕೊಡಗು ಜಿಲ್ಲಾ ಅಧ್ಯಕ್ಷ ಪೂರ್ಣೇಶ್ ಬಿ.ಟಿ, ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತರಾದ ಚಪ್ಪೆಂಡಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸಿ.ಕೆ. ತಿಮ್ಮಯ್ಯ, ಕೆ.ಪಿ.ಎಸ್. ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಚಂದ್ರಕಲಾ, ಶಿಕ್ಷಕಿಯರಾದ ಲಲಿತ ಮೂರ್ನಾಡು, ಪೊನ್ನಮ್ಮ ಹೊದ್ದೂರು, ಜನ ಸೇವಕ ಹಸೈನಾರ್ ಕನ್ನಡಿಯಂಡ, ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷ ವನಜಾಕ್ಷಿ ರೇಣುಕೇಶ್ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಬಳಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಶ್ರೀನಿವಾಸ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವಯ್ಯ ಎಸ್. ಪಲ್ಲೆದ್, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಗುರುರಾಜ. ಕೆ.ಪಿ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಪೊನ್ನಚನ ಶ್ರೀನಿವಾಸ್, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಸುಕ್ರ ದೇವೇಗೌಡ, ಸರ್ಕಾರಿ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕಿರಣ್ ಪಿ.ಎಂ, ಚಪ್ಪೆಂಡಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷ ಅಬ್ಬಾಸ್ ಕೆ.ಎಂ. ಮುಖ್ಯ ಶಿಕ್ಷಕಿ ಹೇಮಾವತಿ, ಚಪ್ಪೆಂಡಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಎ.ಕೆ. ಹ್ಯಾರೀಸ್, ಕೆಪಿಎಸ್ ಶಾಲೆಯ ಉಪ ಪ್ರಾಂಶುಪಾಲ ಶಿವಣ್ಣ ಎಂ.ಎಸ್. ಶಿಕ್ಷಣ ಸಂಯೋಜಕ ಹರೀಶ್, ಮೋಹನ್ ಪೆರಾಜೆ, ಕೆ.ಎ , ಹಾಗೂ ಮಡಿಕೇರಿ ತಾಲೂಕಿನ ಸಮಸ್ತ ಮುಖ್ಯ ಶಿಕ್ಷಕರು ಸಹ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಬೇತು ಎಕ್ಸೆಲ್ ಪಬ್ಲಿಕ್ ಸ್ಕೂಲಿನ ವಿದ್ಯಾರ್ಥಿಗಳ ತಂಡದಿAದ ನೃತ್ಯ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಧ್ಯಾಪಕಿ ತಳೂರು ಉಷಾರಾಣಿ ಸ್ವಾಗತಿಸಿ ಕಾರ್ಯಕ್ರಮವನ್ನು ಕೊಂಪುಳಿದ ಅಶೋಕ್ ನಿರೂಪಿಸಿ, ಸಿ.ಕೆ. ತಿಮ್ಮಯ್ಯ ವಂದಿಸಿದರು. ಕ್ರೀಡಾಕೂಟದಲ್ಲಿ ಮಡಿಕೇರಿ ತಾಲೂಕು ಪ್ರೌಢಶಾಲಾ ವಿಭಾಗದ ನಾಲ್ಕು ವಲಯದ ವಿದ್ಯಾರ್ಥಿಗಳು ಹಾಗೂ ೫ ಪ್ರಾಥಮಿಕ ಶಾಲಾ ವಲಯದ ವಿದ್ಯಾರ್ಥಿ ಕ್ರೀಡಾಪಟುಗಳು ಭಾಗವಹಿಸಿ ವಿವಿಧ ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ರಾಜ್ಯಮಟ್ಟಕ್ಕೆ ಆಯ್ಕೆ ನಡೆಯಿತು. ಮಡಿಕೇರಿ: ಕಾವೇರಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ನಾಯಕರುಗಳಿಗೆ ಪದಗ್ರಹಣ ಸಮಾರಂಭ ಮತ್ತು ಪದ್ಮಶ್ರೀ ಪುರಸ್ಕೃತ ಐಮುಡಿಯಂಡ ರಾಣಿ ಮಾಚಯ್ಯ ಅವರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವರ್ಷದ ಕಾರ್ಯಚಟುವಟಿಕೆಗೆ ಚಾಲನೆ ನೀಡಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಪದ್ಮಶ್ರೀ ಪುರಸ್ಕೃತೆ ಐಮುಡಿಯಂಡ ರಾಣಿ ಮಾಚಯ್ಯನವರನ್ನು ಕಾವೇರಿ ಪದವಿ ಕಾಲೇಜಿನ ವೃತ್ತ ಪ್ರಾಂಶುಪಾಲರಾದ ಪೊ. ಇಟ್ಟೀರ ಕಮಲಾಕ್ಷಿ ಬಿದ್ದಪ್ಪ ಅವರು ಸನ್ಮಾನಿಸಿದರು. ಅವರು ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಮತ್ತು ಮೌಲ್ಯಗಳನ್ನು ಬೆಳೆಸಿಕೊಂಡು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಗುರಿ ಸಾಧಿಸುವ ಛಲ ಇರಬೇಕು ತಂದೆ - ತಾಯಿ, ಗುರುಗಳನ್ನು ಗೌರವದಿಂದ ಕಾಣಬೇಕೆಂದು ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕೆಂದು ಕರೆ ನೀಡಿದರು.

ಇಟ್ಟೀರ ಕಮಲಾಕ್ಷಿ ಬಿದ್ದಪ್ಪನವರು ವಿದ್ಯಾರ್ಥಿ ನಾಯಕರು ಮತ್ತು ತರಗತಿ ಪ್ರತಿನಿಧಿಗಳಿಗೆ (ಪ್ರತಿಜ್ಞಾ ಸ್ವೀಕಾರ) ಪ್ರಮಾಣ ವಚನವನ್ನು ಬೋಧಿಸಿ ನಮ್ಮ ನಡೆ ಸಾಧನೆಯೆಡೆಗೆ ಎನ್ನುವಂತೆ ಸಾಧನೆಯನ್ನು ಮಾಡುವ ಮಾರ್ಗದಲ್ಲಿ ಎಡರು ತೊಡರು ಬರುತ್ತವೆ ಅದನ್ನು ಧೈರ್ಯದಿಂದ ಎದುರಿಸಿ ಕಠಿಣ, ಪರಿಶ್ರಮ, ದೃಢ ನಂಬಿಕೆ, ಬದ್ಧತೆ ಇದ್ದಾಗ ಮಾತ್ರ ಯಶಸ್ವಿಯಾಗಲು ಸಾಧ್ಯ, ಕಲಿಕೆಯು ನಿರಂತರವಾಗಿ ನಡೆಯುವ ಪ್ರಕ್ರಿಯೆ ಯಾವ ಕೆಲಸವು ಕೀಳಾಲ್ಲ ಶಿಸ್ತುಬದ್ಧ ಜೀವನವನ್ನು ಅಳವಡಿಸಿಕೊಳ್ಳಬೇಕೆಂದು ತಿಳಿ ಹೇಳಿದರು.

ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ ಡೈನಾ ಸೋಮಯ್ಯ ಅವರು ತರಗತಿ ಪ್ರತಿನಿಧಿಗಳು ಮತ್ತು ಪದಾಧಿಕಾರಿಗಳ ಪರಿಚಯವನ್ನು ಮಾಡಿದರು. ಉಪನ್ಯಾಸಕರಾದ ದಮಯಂತಿ ಎ.ಪಿ. ಪದ್ಮಶ್ರೀ ಪುರಸ್ಕೃತೆ ಐಮುಡಿಯಂಡ ರಾಣಿ ಮಾಚಯ್ಯ ಅವರನ್ನು ಪರಿಚಯಿಸಿದರು. ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಹಾಕಿ, ಬಾಲ್‌ಬ್ಯಾಡ್ಮಿಂಟನ್, ಕಾಲ್ಚೆಂಡು, ಕಬಡ್ಡಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಜೀವಶಾಸ್ತç ಉಪನ್ಯಾಸಕಿ ದೀಕ್ಷಿತ್ ಅಕ್ಕಮ್ಮ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎನ್.ಎಂ. ನಾಣಯ್ಯನವರು, ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ದೀಪು ಮತ್ತು ತಂಡದ ಪ್ರಾರ್ಥಿಸಿ ಪ್ರಾಂಶುಪಾಲರಾದ ಎನ್.ಎಂ. ನಾಣಯ್ಯ ಅವರು ಸ್ವಾಗತಿಸಿದರು. ರಾಜ್ಯಶಾಸ್ತç ಉಪನ್ಯಾಸಕರಾದ ಕೆ.ಪಿ. ಗಾಯತ್ರಿ ಅವರು ವಂದಿಸಿದರು. ಇತಿಹಾಸ ಉಪನ್ಯಾಸಕಿ ಅನುಪಮ. ಸಿ.ಪಿ. ಹಾಗೂ ವಿದ್ಯಾರ್ಥಿಗಳಾದ ವಿದ್ಯಾ, ಸುಶ್ಮಿತಾ ಮತ್ತು ನಾಫಿಯಾ. ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿಗಳಿಂದ ಹಲವು ಸಾಂಸ್ಕೃತಿಕ ಚಟುವಟಿಕೆಗಳು ನಡೆದವು. ರಾಷ್ಟçಗೀತೆಯೊಂದಿಗೆ ಸಮಾರಂಭ ಮುಕ್ತಾಯಗೊಂಡಿತು. ವೀರಾಜಪೇಟೆ: ಶಾಲಾ ಶಿಕ್ಷಣ ಇಲಾಖೆ ವೀರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಶಿಕ್ಷಣ ಸಮನ್ವಯ ಅಧಿಕಾರಿಗಳ ಕಚೇರಿ ಇವರ ಸಹಯೋಗದಲ್ಲಿ ವೀರಾಜಪೇಟೆಯ ಕ್ಷೇತ್ರ ಶಿಕ್ಷಣ ಸಮನ್ವಯ ಅಧಿಕಾರಿಗಳ ಕಚೇರಿ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನೆಡುವ ವಿನೂತನ ಕಾರ್ಯಕ್ರಮವಾದ ಸಸ್ಯ ಶ್ಯಾಮಲಾ ಕಾರ್ಯಕ್ರಮವನ್ನು ಆಚರಿಸಲಾಯಿತು. ವೀರಾಜಪೇಟೆ ತಾಲೂಕಿನ ಕ್ಷೇತ್ರ ಶಿಕ್ಷಣ ಅಧಿಕಾರಿಗಳಾದ ಎಂ.ಪ್ರಕಾಶ್ ಅವರು ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಪ್ರಕಾಶ್ ಅವರು ಈ ಕಾರ್ಯಕ್ರಮದ ವಿಶೇಷತೆ ಮತ್ತು ಮಹತ್ವದ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣ ಸಮನ್ವಯ ಅಧಿಕಾರಿ ವನಜಾಕ್ಷಿ, ವೀರಾಜಪೇಟೆ ಮತ್ತು ಕಲ್ತೋಡು ಕ್ಲಸ್ಟರ್ ಮಟ್ಟದ ಸಿಆರ್‌ಪಿ ವಿ.ಟಿ. ವೆಂಕಟೇಶ್, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕ ಹಾಗೂ ಜಿಲ್ಲಾ ಸಂಘದ ಅಧ್ಯಕ್ಷರಾದ ಪ್ರವೀಣ್, ಸ್ಥಳೀಯ ಶಾಲೆಯ ಮುಖ್ಯ ಶಿಕ್ಷಕಿ ಪಿ.ಡಿ ಅನ್ನಮ್ಮ, ವೀರಾಜಪೇಟೆ ಮತ್ತು ಕಲ್ತೋಡು ಕ್ಲಸ್ಟರ್ ಮಟ್ಟದ ಶಿಕ್ಷಕರು ಹಾಗೂ ಅತಿಥಿ ಶಿಕ್ಷಕರು ಮತ್ತು ಶಾಲಾ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಚೆಯ್ಯಂಡಾಣೆ: ಕಕ್ಕಬೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿದ ಅಂಬೇಡ್ಕರ್ ವಸತಿ ಶಾಲೆ ಕಕ್ಕಬೆಯ ವಿದ್ಯಾರ್ಥಿಗಳು ಸಾಧನೆ ಮಾಡಿ ಪ್ರಶಸ್ತಿ ಪಡೆದು ಕೊಂಡಿರುತ್ತಾರೆ.

೧ ರಿಂದ ೪ ನೇ ತರಗತಿ ವಿದ್ಯಾರ್ಥಿಗಳ ಸ್ಪರ್ಧೆಯಲ್ಲಿ ಮಣ್ಣಿನ ಮಾದರಿ ತಯಾರಿಕೆಯಲ್ಲಿ ಜಿಂಕೆ ಆಕೃತಿ ಮಾಡಿ ದೀಕ್ಷಿತ್ ಪ್ರಥಮ ಸ್ಥಾನ, ಛದ್ಮವೇಷ ಸ್ಪರ್ಧೆಯಲ್ಲಿ ಚಿಟ್ಟೆಯ ವೇಷ ಧರಿಸಿ ಮೋಹಿತ್ ದ್ವಿತೀಯ ಸ್ಥಾನ,ಇಂಗ್ಲಿಷ್ ಕಂಠಪಾಠದಲ್ಲಿ ರವಿಕೀರ್ತನ್ ತೃತೀಯ,ಭಕ್ತಿಗೀತೆಯಲ್ಲಿ ಕೃಷ್ಣ ದ್ವಿತೀಯ,ಲಘು ಸಂಗೀತದಲ್ಲಿ ಭವ್ಯ ಶ್ರೀ ದ್ವಿತೀಯ,ಚಿತ್ರಕಲೆಯಲ್ಲಿ ಸಂತೋಷ್ ಪ್ರಥಮ ಸ್ಥಾನಕ್ಕೆ ಪಾತ್ರರಾದರು.

೫ ರಿಂದ ೭ ನೇ ತರಗತಿ ವಿದ್ಯಾರ್ಥಿಗಳ ಸ್ಪರ್ಧೆಯಲ್ಲಿ ಮಣ್ಣಿನ ಮಾದರಿ ತಯಾರಿಕೆಯಲ್ಲಿ ಮೊಸಳೆ ಆಕೃತಿ ತಯಾರಿಸಿ ವಿನು ಪ್ರಥಮ, ಛದ್ಮವೇಷ ಸ್ಪರ್ಧೆಯಲ್ಲಿ ನೊಣ ವೇಷ ಧÀರಿಸಿ ಪೊನ್ನಣ್ಣ ಪ್ರಥಮ ಹಾಗೂ ಚಿತ್ರಕಲೆಯಲ್ಲಿ ತೃತೀಯ ಸ್ಥಾನ, ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಲು ಅರ್ಹತೆಯನ್ನು ಪಡೆದಿರುತ್ತಾರೆ.

ಮಡಿಕೇರಿ: ಮಡಿಕೇರಿಯ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯು ಯಶಸ್ವಿಯಾಗಿ ೨೫ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ತಾ. ೨೩ರಂದು ಶಾಲೆಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ಬೆಳ್ಳಿ ಮಹೋತ್ಸವದ ಲೋಗೋವನ್ನು ಅನಾವರಣಗೊಳಿಸಲಾಯಿತು. ಕೊಡವ ಸಮಾಜದ ಹಾಗೂ ಶಾಲೆಯ ಅಧ್ಯಕ್ಷರಾದ ಮಂಡುವAಡ ಪಿ. ಮುತ್ತಪ್ಪನವರು ಲೋಗೋ ವೀಡಿಯೋವನ್ನು ಉದ್ಘಾಟಿಸಿದರು. ಕೊಡವ ಸಮಾಜದ ಉಪಾಧ್ಯಕ್ಷ ಹಾಗೂ ಶಾಲೆಯ ಕಾರ್ಯಧ್ಯಕ್ಷರಾದ ನಂದಿನೆರವAಡ ಚೀಯಣ್ಣರವರು ಲೋಗೋವನ್ನು ಅನಾವರಣಗೊಳಿಸಿದರು.

ಅಧ್ಯಕ್ಷರಾದ ಮಂಡುವAಡ ಪಿ. ಮುತ್ತಪ್ಪ ಅವರು ಮಾತನಾಡಿ ಜನರಲ್ ತಿಮ್ಮಯ್ಯ ಶಾಲೆಯು ಉತ್ತಮ ಶಿಕ್ಷಣವನ್ನು ನೀಡುವ ಮೂಲಕ ಮಾದರಿ ಶಾಲೆಯಾಗಿ ಇಂದು ೨೫ನೇ ವರ್ಷಕ್ಕೆ ಪಾದಾರ್ಪಣೆ ಮಾಡಿ ಬೆಳ್ಳಿ ಮಹೋತ್ಸವವನ್ನು ಆಚರಿಸುತ್ತಿದೆ. ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ತರಬೇಕೆಂದು ತಿಳಿಸಿದರು.

ವೇದಿಕೆಯಲ್ಲಿ ಶಾಲಾ ಕರೆಸ್ಪಾಂಡೆAಟ್ ಕನ್ನಂಡ ಕವಿತ ಕಾವೇರಮ್ಮ, ಆಡಳಿತ ಮಂಡಳಿಯ ನಿರ್ದೇಶಕರುಗಳಾದ ನಂದಿನೆರವAಡ ಎಂ.ದಿನೇಶ್, ಕೇಕಡ ದೇವಯ್ಯ, ಕಾಳಚಂಡ ಅಪ್ಪಣ್ಣ, ಪುತ್ತರಿರ ಕರುಣ್‌ಕಾಳಯ್ಯ, ಮಂಡೀರ ಸದಾ ಮುದ್ದಪ್ಪ, ಮೂವೇರ ಜಯರಾಂ, ಹಿರಿಯ ಶಿಕ್ಷಣ ಸಲಹೆಗಾರರಾದ ಚೌರೀರ ಕಾವೇರಿ ಪೂವಯ್ಯ, ಅಮ್ಮಾಟಂಡ ಪಾರ್ವತಿ ಅಪ್ಪಯ್ಯ, ಶಾಲಾ ಪ್ರಾಂಶುಪಾಲೆ ಕಲ್ಲುಮಾಡಂಡ ಸರಸ್ವತಿ ಸುಬ್ಬಯ್ಯ ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಅತಿಥಿಗಳು ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಲಾ ವಿದ್ಯಾರ್ಥಿನಿ ಸಿಂಚನ ಪ್ರಸನ್ನ ಸ್ವಾಗತಿಸಿ, ಶಾಲಾ ಶಿಕ್ಷಕಿಯಾದ ಸುಮಿತ್ರ ಈರಪ್ಪ ಪ್ರಾಸ್ತಾವಿಕ ಭಾಷಣ ಮಾಡಿದರು. ವಿಪುಲ್ ಸೋಮಣ್ಣ ವಂದಿಸಿ, ಪೂರ್ಣ ಪೂವಮ್ಮ ಕಾರ್ಯವನ್ನು ನಿರೂಪಿಸಿದರು. ಶಾಲಾ ಶಿಕ್ಷಕವೃಂದ, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಮುಳ್ಳೂರು: ಸಮೀಪದ ಶನಿವಾರಸಂತೆ ರೋಟರಿ ಕ್ಲಬ್ ವತಿಯಿಂದ ಸ್ಥಳೀಯ ಶ್ರೀ ವಿಘ್ನೇಶ್ವರ ಬಾಲಕಿಯರ ಪ.ಪೂ.ಕಾಲೇಜಿನಲ್ಲಿ ವಿದ್ಯಾರ್ಥಿಗಳ ರೋಟರಿ ಇಂರ‍್ಯಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭವನ್ನು ಕಾಲೇಜಿನಲ್ಲಿ ಶನಿವಾರಸಂತೆ ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಕಾAತ್ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಯಿತು. ಪದಗ್ರಹಣ ಅಧಿಕಾರಿ ಪಿ.ಕೆ. ರವಿ ವಿದ್ಯಾರ್ಥಿನಿಯರಿಗೆ ಇಂಟ್ರಾಕ್ಟ್ ಕ್ಲಬ್‌ನ ಜವಾಬ್ದಾರಿ, ರೋಟರಿ ಸಂಸ್ಥೆಯ ವಿಶ್ವ ವ್ಯಾಪ್ತಿಯ ಸಮಾಜ ಸೇವೆ, ಸಂಸ್ಥೆ ವತಿಯಿಂದ ನಡೆಯುತ್ತಿರುವ ಕಾರ್ಯಕ್ರಮಗಳು ಮುಂತಾದ ರೋಟರಿ ಸಂಸ್ಥೆಯ ಕಾರ್ಯಗಳ ಕುರಿತು ಮಾಹಿತಿ ನೀಡಿದರು.

ರೋಟರಿ ಕ್ಲಬ್ ಸದಸ್ಯ ಕೆ.ಪಿ. ಜಯಕುಮಾರ್ ಮಾತನಾಡಿ, ನಿಸ್ವಾರ್ಥ ಸಮಾಜ ಸೇವೆಯೇ ರೋಟರಿ ಸಂಸ್ಥೆಯ ಉದ್ದೇಶವಾಗಿದ್ದು, ಸಂಸ್ಥೆ ವತಿಯಿಂದ ಶಿಕ್ಷಣ, ಆರೋಗ್ಯ, ಅರಣ್ಯ, ಪರಿಸರ, ಸ್ವಚ್ಚತ್ತೆಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ ರೋಟರಿ ಸಂಸ್ಥೆಯಲ್ಲಿ ಸಮಾಜ ಸೇವೆಗೆ ಸಂಬAಧಪಟ್ಟ ಹಲವಾರು ಕಾರ್ಯಗಳಿದ್ದು ಈ ಮೂಲಕ ಸಂಸ್ಥೆಯ ಸದಸ್ಯರು ಸಮಾಜಮುಖಿ ಕಾರ್ಯ ಮಾಡುತ್ತಿದೆ ಎಂದರು.

ಅಧ್ಯಕ್ಷತೆ ವಹಿಸಿದ ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಕಾAತ್ ಮಾತನಾಡಿ-ರೋಟರಿ ಸಂಸ್ಥೆಯು ಹಲವು ಯೋಜನೆಗಳನ್ನು ಹಮ್ಮಿಕೊಂಡು ಸಮಾಜ ಸೇವೆ ಮಾಡುತ್ತಿದೆ. ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗಾಗಿ ಇಂರ‍್ಯಾಕ್ಟ್ ಕ್ಲಬ್‌ಗಳನ್ನು ಸ್ಥಾಪಿಸುತ್ತಿದೆ ಇದರಿಂದ ವಿದ್ಯಾರ್ಥಿಗಳಿಗೆ ಸಮಾಜ ಸೇವೆ ಕುರಿತು ಅರಿವು ಮತ್ತು ಆಸಕ್ತಿ ಮೂಡಲು ಸಹಕಾರಿಯಾಗುತ್ತದೆ ಎಂದರು.

ಪ.ಪೂ.ಕಾಲೇಜು ಪ್ರಾಂಶುಪಾಲ ಟಿ.ಪಿ.ಶಿವಪ್ರಕಾಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ರೋಟರಿ ಕ್ಲಬ್ ಕಾರ್ಯದರ್ಶಿ ಸೋಮಶೇಖರ್ ರೋಟರಿ ಸದಸ್ಯರಾದ ಎ.ಡಿ.ಮೋಹನ್‌ಕುಮಾರ್, ಅರವಿಂದ್, ಸಂತೋಷ್, ಎಚ್.ಎಸ್.ವಸಂತ್ ಹಾಜರಿದ್ದರು. ಸಮಾರಂಭದಲ್ಲಿ ವಿದ್ಯಾರ್ಥಿನಿಯರು, ಉಪನ್ಯಾಸಕರು ಭಾಗವಹಿಸಿದ್ದರು. ಪ.ಪೂ.ಕಾಲೇಜಿನ ವಿದ್ಯಾರ್ಥಿನಿಯರ ಇಂರ‍್ಯಾಕ್ಟ್ ಕ್ಲಬ್‌ನ ಪದಾಧಿಕಾರಿಗಳು: ಅಧ್ಯಕ್ಷರಾಗಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸುಶ್ಮಿತಾ, ಕಾರ್ಯದರ್ಶಿಯಾಗಿ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿನಿ ಅಂಕಿತ ಇವರುಗಳು ಆಯ್ಕೆಯಾಗಿದ್ದು ಪದಗ್ರಹಣ ಸಮಾರಂಭದಲ್ಲಿ ಅಧಿಕಾರ ಹಸ್ತಾಂತರಿಸಲಾಯಿತು.

ಪಾಲಿಬೆಟ್ಟ: ಪಠ್ಯ ಚಟುವಟಿಕೆಗಳ ಜೊತೆಗೆ ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳನ್ನು ಹೊರತರಲು ಮತ್ತು ಪ್ರತಿಭೆಗಳ ಬೆಳವಣಿಗೆಗೆ ಪ್ರತಿಭಾ ಕಾರಂಜಿ ವೇದಿಕೆಯಾಗಿದೆ ಎಂದು ವೀರಾಜಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ್ ಅಭಿಪ್ರಾಯಪಟ್ಟರು.

ಅಮ್ಮತ್ತಿ ಒಂಟಿಯAಗಡಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಲೋತ್ಸವ ಕಾರ್ಯಕ್ರಮವನ್ನು ದೀಪಾಕಾರದ ಪುಷ್ಪ ರಂಗೋಲಿಗೆ ಸ್ಪರ್ಶ ನೀಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ತಾಲೂಕು ಸಂಪನ್ಮೂಲ ಸಮನ್ವಯಾಧಿಕಾರಿ ವನಜಾಕ್ಷಿ ಮಾತನಾಡಿ, ತುಂಬಾ ಸಂಭ್ರಮದಿAದ ಇಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ