ಮಡಿಕೇರಿ, ಸೆ. ೨೮ : ಕೊಡಗು ಜಿಲ್ಲಾ ಅನುದಾನ ರಹಿತ ಶಾಲಾ ಆಡಳಿತ ಮಂಡಳಿ ಒಕ್ಕೂಟದ ವತಿಯಿಂದ ತಾ. ೩೦ರಂದು (ನಾಳೆ) ಕುಶಾಲನಗರದಲ್ಲಿ ಜಿಲ್ಲಾ ಸಮಾವೇಶ ನಡೆಯಲಿದೆ. ಬೆಳಿಗ್ಗೆ ೧೦.೩೦ ಗಂಟೆಗೆ ರೈತ ಸಹಕಾರ ಭವನದಲ್ಲಿ ಅನುದಾನ ರಹಿತ ಶಾಲೆಗಳ ಶಿಕ್ಷಕರ ಕೊಡಗು ಮತ್ತು ಶಾಲೆಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಒಕ್ಕೂಟದ ಅಧ್ಯಕ್ಷ ಕೋಳೆರ ಝರು ಗಣಪತಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎ.ಎಸ್. ಪೊನ್ನಣ್ಣ, ಮಂಥರ್ ಗೌಡ, ವಿಧಾನಪರಿಷತ್ ಸದಸ್ಯರಾದ ಎಂ.ಪಿ. ಸುಜಾ ಕುಶಾಲಪ್ಪ, ಎಸ್.ಎಲ್. ಬೋಜೇಗೌಡ, ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಬಾರ ಉಪನಿರ್ದೇಶಕ ಎ. ಸೌಮ್ಯ ಪೊನ್ನಪ್ಪ ಹಾಗೂ ಮಡಿಕೇರಿ, ಸೋಮವಾರಪೇಟೆ, ವೀರಾಜಪೇಟೆ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪೊನ್ನಂಪೇಟೆ ಅರಣ್ಯ ಕಾಲೇಜಿನ ಮಾಜಿ ಡೀನ್ ಡಾ. ಸಿ.ಜಿ. ಕುಶಾಲಪ್ಪ ಪಾಲ್ಗೊಳ್ಳಲಿದ್ದಾರೆ.