ಕರಿಕೆ, ಸೆ. ೨೯: ಇಲ್ಲಿನ ಸ್ಥಳೀಯ ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಮಡಿಕೇರಿ ತಾಲೂಕು ಪಂಚಾಯಿತಿ ಮಡಿಕೇರಿ ಇದರ ವತಿಯಿಂದ ಸ್ವಚ್ಛತೆಯೇ ಸೇವೆ ಎಂಬ ತ್ಯಾಜ್ಯ ಮುಕ್ತ ಭಾರತ ಅಭಿಯಾನ ಜಾಥಾ ಕಾರ್ಯಕ್ರಮ ಗ್ರಾಮ ಪಂಚಾಯಿತಿ ಆವರಣದಲ್ಲಿ ಗ್ರಾಮಸ್ಥರ ಸಮ್ಮುಖದಲ್ಲಿ ನಡೆಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್. ಬಾಲಚಂದ್ರ ನಾಯರ್ ಜಾಥಾಕ್ಕೆ ಚಾಲನೆ ನೀಡಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಣಪತಿ ಪಿ.ಪಿ. ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿ, ಪ್ರತಿಜ್ಞಾ ವಿಧಿ ಬೋಧಿಸಿದರು.

ಈ ಸಂದರ್ಭದಲ್ಲಿ ಪಂಚಾಯಿತಿ ಉಪಾಧ್ಯಕ್ಷೆ ಕುದುಪಜೆ ಕಲ್ಪನಾ ಜಗದೀಶ್, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ನಾರಾಯಣ, ದೀಪಿಕಾ ಪಂಚಾಯಿತಿ ಸಿಬ್ಬಂದಿ ವರ್ಗ, ಗ್ರಾಮಸ್ಥರು ಪಾಲ್ಗೊಂಡಿದ್ದರು.