ಗುಡ್ಡೆಹೊಸೂರು, ಸೆ. ೨೯: ಇಲ್ಲಿನ ಹಾಲು ಉತ್ಪಾದಕರ ಸಹಕಾರ ಸಂಘದ ಮಹಾ ಸಭೆಯು ಸಂಘದ ಅಧ್ಯಕ್ಷ ಬಿ.ಎಂ. ಸಾಗರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಉಪಾಧ್ಯಕ್ಷ ಎನ್.ಪಿ. ಸುಲೋಚನ ಮತ್ತು ಎಲ್ಲಾ ನಿರ್ದೇಶಕರು ಹಾಜರಿದ್ದರು. ಮುಖ್ಯ ಅತಿಥಿಗಳಾಗಿ ಕೂಡಿಗೆ ವೃತ್ತದ ವಿಸ್ತರಣಾಧಿಕಾರಿ ಬಿ.ವಿ. ವೀಣಾ ಭಾಗವಹಿಸಿದ್ದರು.

ಈ ಸಂದರ್ಭ ಆಡಳಿತ ಮಂಡಳಿ ಮತ್ತು ಸದಸ್ಯರ ನಡುವೆ ಸಂಘದ ಕಾರ್ಯವೈಖರಿಗಳ ಬಗ್ಗೆ ಚರ್ಚೆ ನಡೆಯಿತು. ಇದೇ ಸಂದರ್ಭ ಡೈರಿಗೆ ಹೆಚ್ಚು ಹಾಲು ನೀಡುವ ಸದಸ್ಯರಿಗೆ ಬಹುಮಾನ ವಿತರಿಸಲಾಯಿತು. ಅಲ್ಲದೆ ೭,೧೦ ಮತ್ತು ಪಿ.ಯುಸಿಯಲ್ಲಿ ಹೆಚ್ಚು ಅಂಕಪಡೆದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಸಂಘದ ಕಾರ್ಯದರ್ಶಿ ಬಿ.ಪಿ.ಗುರುಬಸಪ್ಪ ಕಾರ್ಯಕ್ರಮ ನಿರೂಪಿಸಿ, ಸರ್ವರನ್ನು ಸ್ವಾಗತಿಸಿ, ಸರ್ವರನ್ನು ವಂದಿಸಿದರು. ಈ ಸಂದರ್ಭ ಸಂಘದ ಸದಸ್ಯರು ಹಾಜರಿದ್ದರು.