ಮಡಿಕೇರಿ, ಸೆ. ೨೮ : ಮಡಿಕೇರಿ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ನೂತನ ಯೋಜನಾ ಕಚೇರಿಯ ಉದ್ಘಾಟನೆ ನೆರವೇರಿತು. ರಾಣಿಪೇಟೆಯ ಲಕ್ಸಿö್ಮ ಏಜೆನ್ಸಿ ಕಟ್ಟಡದಲ್ಲಿ ನೂತನ ಕಚೇರಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯ ನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಐಡಿಬಿಐ ಬ್ಯಾಂಕ್‌ನ ಸಹಾಯಕ ಪ್ರಧಾನ ವ್ಯವಸ್ಥಾಪಕ ಕೆ. ಮಿಥುನ್ ವಹಿಸಿದ್ದರು. ಅತಿಥಿಗಳಾಗಿ ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಬಿ.ಸಿ. ಟ್ರಸ್ಟ್ನ ಉಡುಪಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ, ಭಾರತೀಯ ಸ್ಟೇಟ್ ಬ್ಯಾಂಕ್‌ನ ಪ್ರಾದೇಶಿಕ ವ್ಯವಸ್ಥಾಪಕ ವಿ.ಕೆ. ಶ್ರೀಜಿತ್, ಶ್ರೀ.ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ. ಟ್ರಸ್ಟ್ನ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ, ಯೋಜನಾ ಕಚೇರಿ ಕಟ್ಟಡ ಮಾಲೀಕ ಕೆ.ಎನ್. ಗಜಾನನ ಪಾಲ್ಗೊಂಡಿದ್ದರು.