ಪೊನ್ನಂಪೇಟೆ, ಸೆ. ೨೯: ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಮಾದಾಪುರ ಶ್ರೀಮತಿ ಚೆನ್ನಮ್ಮ ಪಿ.ಯು. ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿ ಯಲ್ಲಿ ಪೊನ್ನಂಪೇಟೆ ಕೂರ್ಗ್ ಇನ್ಸಿ÷್ಟಟ್ಯೂಟ್ ಆಫ್ ಪಿ.ಯು. ಕಾಲೇಜಿನ ಪ್ರಥಮ ಪಿ.ಯು. ವಿದ್ಯಾರ್ಥಿ ಲಿಜೋ ಜೇಮ್ಸ್ ಪ್ರಥಮ ಸ್ಥಾನ ಗಳಿಸಿ, ರಾಜ್ಯಮಟ್ಟದ ಚೆಸ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ ಎಂದು ಪ್ರಾಂಶುಪಾಲೆ ಡಾ. ರೋಹಿಣಿ ತಿಮ್ಮಯ್ಯ ತಿಳಿಸಿದ್ದಾರೆ. ಈ ವಿದ್ಯಾರ್ಥಿ ಪೊನ್ನಂಪೇಟೆಯ ಹಳ್ಳಿಗಟ್ಟುವಿನ ಪಿ.ಜೆ. ಜೊಲಿ ಮತ್ತು ವಿ.ವಿ. ಬಿನಿ ದಂಪತಿ ಪುತ್ರ.