ಮಡಿಕೇರಿ, ಸೆ. ೨೯: ಮಡಿಕೇರಿ ಕೊಡವ ಸಮಾಜದ ಅಭಿವೃದ್ಧಿ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಂಸದ ಪ್ರತಾಪ ಸಿಂಹ ಅವರನ್ನು ಮೈಸೂರಿನ ಅವರ ಕಚೇರಿಯಲ್ಲಿ ಮಡಿಕೇರಿ ಕೊಡವ ಸಮಾಜದ ವತಿಯಿಂದ ಭೇಟಿ ಮಾಡಲಾಯಿತು. ನಿರ್ದೇಶಕರಾದ ಕೇಕಡ ವಿಜು ದೇವಯ್ಯ, ನಂದಿನೆರವAಡ ರವಿ ಬಸಪ್ಪ, ಮಂಡಿರ ಸದಾ ಮುದ್ದಪ್ಪ, ಕಾಳಚಂಡ ಅಪ್ಪಣ್ಣ, ಮೂವೆರ ಜಯರಾಂ, ಶಾಂತೆಯAಡ ವಿಶಾಲ್ ಕಾರ್ಯಪ್ಪ ಹಾಗೂ ಚೊಟ್ಟೆಯಂಡ ಸಂಜು ಕಾವೇರಪ್ಪ ಭೇಟಿ ಮಾಡಲಾಯಿತು.
ಮಡಿಕೇರಿ ಕೊಡವ ಸಮಾಜ ಅಧ್ಯಕ್ಷ ಮಂಡುವAಡ ಮುತ್ತಪ್ಪ ಅವರು ಮಡಿಕೇರಿ ಕೊಡವ ಸಮಾಜದ ಕಟ್ಟಡದ ಅಭಿವೃದ್ಧಿ ಕಾರ್ಯ ನಡೆಯುತ್ತಿದ್ದು, ಸರಕಾರದಿಂದ ಅನುದಾನವನ್ನು ಬಿಡುಗಡೆ ಮಾಡಿಸುವಂತೆ ಮನವಿ ಮಾಡಿದರು.