ಸೋಮವಾರಪೇಟೆ, ಅ.೧: ಜಿಲ್ಲೆಯಾದ್ಯಂತ ಇರುವ ಸರಕಾರಿ ಶಾಲೆಗಳ ಕಟ್ಟಡ ದುರಸ್ತಿ ಹಾಗೂ ಶಿಕ್ಷಕರ ಕೊರತೆ ಎದುರಿಸುತ್ತಿರುವ ಶಾಲೆಗಳಿಗೆ ಖಾಯಂ ಶಿಕ್ಷಕರ ನೇಮಕಾತಿ ಮಾಡಲು ಕ್ರಮಕೈಗೊಳ್ಳುವಂತೆ ಕಾಂಗ್ರೆಸ್ ಹಿಂದುಳಿದ ಘಟಕದ ವತಿಯಿಂದ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.

ತಾಲೂಕು ಹಿಂದೂ ಮಲಯಾಳ ಸಮಾಜದ ವತಿಯಿಂದ ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಓಣಂ ಕಾರ್ಯಕ್ರಮಕ್ಕೆ ಆಗಮಿಸಿದ ಸಚಿವರಿಗೆ, ಕಾಂಗ್ರೆಸ್ ಹಿಂದುಳಿದ ಘಟಕದ ಜಿಲ್ಲಾಧ್ಯಕ್ಷ ಬಾನಂಡ ಪೃಥ್ಯು ಅವರು ಮನವಿ ಸಲ್ಲಿಸಿದರು.

ಕೊಡಗು ಜಿಲ್ಲೆಯಾದ್ಯಂತ ದುಸ್ಥಿತಿಯಲ್ಲಿರುವ ಸರಕಾರಿ ಶಾಲೆಗಳ ಕಟ್ಟಡ ದುರಸ್ತಿಗೆ ಅನುದಾನ ಬಿಡುಗಡೆಗೊಳಿಸುವುದು ಸೇರಿದಂತೆ ಶಿಕ್ಷಕರ ಕೊರತೆ ಎದುರಿಸುತ್ತಿರುವ ಶಾಲೆಗಳಿಗೆ ಶಿಕ್ಷಕರನ್ನು ನೇಮಿಸುವಂತೆ ಕೋರಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭ ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಹಿಂದೂ ಮಲಯಾಳ ಸಮಾಜದ ಅಧ್ಯಕ್ಷ ವಿ.ಎಂ. ವಿಜಯ ಸೇರಿದಂತೆ ಇತರರು ಉಪಸ್ಥಿತರಿದ್ದರು.