ಸೋಮವಾರಪೇಟೆ, ಅ. ೧: ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ, ಕೊಡಗು ಜಿಲ್ಲಾ ಕರಾಟೆ ಅಸೋಸಿಯೇಷನ್ ಆಶ್ರಯದಲ್ಲಿ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಸೋಮವಾರಪೇಟೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಪಿ.ಬಿ. ಸಂಜನ ಪ್ರಥಮ ಸ್ಥಾನ ಪಡೆದು, ಶಿವಮೊಗ್ಗದಲ್ಲಿ ನಡೆಯುವ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಸೋಮವಾರಪೇಟೆ ಬಾಬುರಾಯ ಮತ್ತು ಶುಭಾ ದಂಪತಿ ಪುತ್ರಿ ನ್ಯಾಷನಲ್ ಇನ್ಸಿ÷್ಟಟ್ಯೂಟ್ ಆಫ್ ಕರಾಟೆ ಮತ್ತು ಯೋಗ ಸಂಸ್ಥೆಯಲ್ಲಿ ತರಬೇತಿ ಪಡೆದಿರುತ್ತಾರೆ.