ಮಡಿಕೇರಿ, ಸೆ. ೩೦ : ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಸಮುದಾಯ ಭವನದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶೂನ್ಯ ತ್ಯಾಜ್ಯ ಹಾಗೂ ಒಡಿಎಫ್+ ಮಾಡಲು ವಿಶೇಷÀ ಗ್ರಾಮ ಸಭೆಯನ್ನು ತಾ. ೨ರಂದು ಪೂರ್ವಾಹ್ನ ೧೦ ಗಂಟೆಗೆ ಕರೆಯಲಾಗಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಶನ್ ಬಿ.ಎಸ್. ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿರುವುದಾಗಿ ಪ್ರಕಟಣೆ ತಿಳಿಸಿದೆ.