ಕೂಡಿಗೆ, ಅ. ೧: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಚೇರಿ, ಇವರ ಆಶ್ರಯದಲ್ಲಿ ಮೈಸೂರು ವಿಭಾಗ ಮತ್ತು ರಾಜ್ಯಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ, ಬಾಲಕಿಯರ ೨೦೨೩-೨೪ನೇ ಸಾಲಿನ ಹಾಕಿ ಪಂದ್ಯಾವಳಿ ತಾ. ೯ ರಂದು ಕೂಡಿಗೆ ಕ್ರೀಡಾ ಶಾಲೆಯ ಹಾಕಿ ಟರ್ಫ್ ಮೈದಾನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಪ್ರಬಾರಿ ದೈಹಿಕ ಶಿಕ್ಷಣಾಧಿಕಾರಿ ಡಾ. ಸದಾಶಿವಯ್ಯ ಎಸ್. ಪಲ್ಲೇದ್ ತಿಳಿಸಿದ್ದಾರೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ, ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ, ಎಸ್.ಎಲ್. ಭೋಜೇಗೌಡ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್, ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಟಿ. ಗಿರೀಶ್, ಜಿಲ್ಲಾ ಪಂಚಾಯಿತಿ ಉಸ್ತುವಾರಿಗಳಾದ ಡಾ. ಎನ್.ವಿ. ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ವರ್ಣೀತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಸೇರಿದಂತೆ ಇಲಾಖೆ ರಾಜ್ಯಮಟ್ಟದ ಅಧಿಕಾರಿ ವರ್ಗದವರು, ವಿಭಾಗಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಶಿಕ್ಷಣ ಇಲಾಖೆ ಸಂಘಟನೆಯ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಹಾಕಿ ಪಂದ್ಯಾವಳಿಯ ಮುಖ್ಯಸ್ಥರು ತಿಳಿಸಿದ್ದಾರೆ.